– ಕಿಟ್‍ಗಳ ವಿತರಣೆಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಚಾಲನೆ
– ವಿಜಯಪುರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ
ಯಾದಗಿರಿ/ವಿಜಯಪುರ: ಯಾದಗಿರಿ ಜಿಲ್ಲೆಯಲ್ಲಿ ಸುಮಾರು 6 ಸಾವಿರ ಬಡಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ಗಳನ್ನು ಅಜೀಂ ಪ್ರೇಮ್ ಜೀ ಫೌಂಡೇಶನ್ ವತಿಯಿಂದ ವಿತರಿಸಲಾಗುತ್ತಿದ್ದು, ಈ ವಿತರಣೆಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಚಾಲನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಫಲಾನುಭವಿಯೊಬ್ಬರಿಗೆ ಫುಡ್‍ಕಿಟ್ ವಿತರಿಸುವ ಮೂಲಕ ಅವರು ಜಿಲ್ಲಾಧಿಕಾರಿಗಳು ಫೌಂಡೇಶನ್‍ನ ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊರೊನಾ 2ನೇ ಅಲೆಯ ವಿಪತ್ತಿನ ಸಮಯದಲ್ಲಿ ತೊಂದರೆಗೆ ಒಳಗಾಗಿದ್ದ ಕುಟುಂಬಗಳಿಗೆ ಆಹಾರಧಾನ್ಯಗಳ ಕಿಟ್ ವಿತರಿಸುವ ಮೂಲಕ ಅಜೀಂ ಪ್ರೇಮ್ ಜೀ ಫೌಂಡೇಶನ್ ನೆರವಿನ ಹಸ್ತ ಚಾಚಿದೆ.
Advertisement
Advertisement
ಯಾದಗಿರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಡಕುಟುಂಬಗಳು ಅತೀವ ಸಂಕಷ್ಟಕ್ಕೆ ಒಳಗಾಗಿವೆ, ಇಂತಹ ಕುಟುಂಬಗಳನ್ನು ಅಜೀಂ ಪ್ರೇಮ್ ಜೀ ಫೌಂಡೇಶನ್ ಸರ್ಕಾರಿ ಶಾಲಾ ಶಿಕ್ಷಕರ ಸಹಾಯದಿಂದ ಗುರುತಿಸಿ ಅವರ ಮನೆ ಬಾಗಿಲಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆಯುತ್ತಿದೆ.
Advertisement
ವಿಜಯಪುರದಲ್ಲಿಯೂ ಆಹಾರ ಕಿಟ್ ವಿತರಣೆ:
ವಿಜಯಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಜೀಂ ಪ್ರೇಮ್ ಜೀ ಫೌಂಡೇಶನ್ ನೀಡಿದ ಆಹಾರ ಕಿಟ್ ವಿತರಣೆ ಮಾಡಿದರು. ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಆಹಾರ ಕಿಟ್ ವಿತರಣೆ ಮಾಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಪುಡ್ ಕಿಟ್ ವಿತರಿಸಿದ ಸಚಿವೆ ಶಶಿಕಲಾ ಜೊಲ್ಲೆ ಒಟ್ಟು 1,752 ಜನರಿಗೆ ಆಹಾರ ಕಿಟ್ ವಿತರಿಸಿದರು.
Advertisement
10 ಕೆ.ಜಿ ಅಕ್ಕಿ, 5 ಗೋಧಿ ಹಿಟ್ಟು, 1 ಕೆಜಿ ಸಕ್ಕರೆ, ಟೀ ಪುಡಿ, ಖಾರದ ಪುಡಿ, ಗರಂ ಮಸಾಲಾ, ಎಣ್ಣೆ, ಬೇಳೆ ಸೇರಿದಂತೆ 1 ಸಾವಿರ ಬೆಲೆಯ ಆಹಾರ ಕಿಟ್ ಇದಾಗಿದೆ.