ಚಾಮರಾಜನಗರ: ಅಜ್ಜಿ ಸಾವನ್ನಪ್ಪಿದ್ದ ದುಃಖದಲ್ಲಿದ್ದ ವಿದ್ಯಾರ್ಥಿನಿ ಹಾಗೂ ಕೊರೊನಾ ಭೀತಿಯಲ್ಲಿದ್ದ ಇನ್ನಿಬ್ಬರು ವಿದ್ಯಾರ್ಥಿಗಳನ್ನು ಅಧಿಕಾರಿಗಳು ಮನವೊಲಿಸಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ನಿವಾಸದಲ್ಲಿ ತಿಂಗಳ ಹಿಂದೆ ವಿದ್ಯಾರ್ಥಿನಿ ಪಾರ್ವತಿ ಅವರ ಅಜ್ಜಿ ಗೌರಮ್ಮ ನಿಧನರಾಗಿದ್ದರು. ಈ ದುಃಖದಲ್ಲಿದ್ದಲ್ಲಿದ್ದ ವಿದ್ಯಾರ್ಥಿನಿ ಪಾವರ್ತಿ ಪರೀಕ್ಷೆಯಿಂದ ದೂರ ಉಳಿದಿದ್ದರು. ಅಲ್ಲದೇ ವಿದ್ಯಾರ್ಥಿನಿಯ ಚಿಕ್ಕಪ್ಪನ ಪುತ್ರಿಯರಾದ ಪ್ರೀತಿ ಮತ್ತು ಪುಷ್ಪ ಕೂಡ ಕೊರೊನಾ ಭೀತಿಯಿಂದ ಮನೆಯಲ್ಲಿ ಉಳಿದುಕೊಂಡಿದ್ದರು.
Advertisement
Advertisement
ಇಂದು ಆರಂಭವಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಮೂವರು ವಿದ್ಯಾರ್ಥಿಗಳು ಹಾಜರಾಗಿರಲಿಲ್ಲ. ಈ ಮಾಹಿತಿ ತಿಳಿದ ಬಿಇಒ ಚಂದ್ರಪಾಟೀಲ್, ಸಿಂಗಾನಲ್ಲೂರು ಗ್ರಾಮದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ ಭೇಟಿ ನೀಡಿದ್ದ ಶಾಸಕ ಆರ್.ನರೇಂದ್ರ ಅವರಿಗೆ ಮಾಹಿತಿ ನೀಡಿದ್ದರು. ಅಲ್ಲದೇ ತುರ್ತಾಗಿ ಮೂವರು ವಿದ್ಯಾರ್ಥಿನಿಯರನ್ನು ಮನವೊಲಿಸಿ ಪರೀಕ್ಷೆ ಬರೆಸಲು ನಿರ್ದೇಶಿತರಾದರು. ತಕ್ಷಣ ಎಚ್ಚೆತ್ತ ಅಧಿಕಾರಿಗಳು ಮಧುವನಹಳ್ಳಿಗೆ ತೆರಳಿ ವಿದ್ಯಾರ್ಥಿಗಳನ್ನು ಸಿಂಗಾನಲ್ಲೂರು ಗ್ರಾಮದ ಪರೀಕ್ಷಾ ಕೇಂದ್ರಕ್ಕೆ ಕರೆ ತಂದು ಇಂಗ್ಲೀಷ್ ಪರೀಕ್ಷೆ ಬರೆಸುವಲ್ಲಿ ಯಶಸ್ವಿಯಾಗಿದ್ದಾರೆ.