ಅತಿವೃಷ್ಟಿ ಪರಿಹಾರ ಕಾರ್ಯಕ್ಕೆ ಡಿಸಿ ಖಾತೆಯಲ್ಲಿ 950 ಕೋಟಿ ಮೀಸಲು: ಸಚಿವ ಆರ್.ಅಶೋಕ್

Public TV
2 Min Read
R Ashok 3

ಹಾಸನ: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಧಿಕಾರಿಗಳ ಖಾತೆಯಲ್ಲಿ 950 ಕೋಟಿ ಹಣ ಪ್ರವಾಹ ನಿರ್ವಹಣೆಗೆಂದೇ ಮೀಸಲಿರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ .

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಕುಸಿತಗೊಂಡಿರುವ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಳೆದ ಕೆಲ ದಿನದಿಂದ ಉತ್ತಮ ಮಳೆಯಾಗುತ್ತಿದೆ. ಇದರಿಂದ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜಿಲ್ಲಾಧಿಕಾರಿಗಳ ಖಾತೆಯಲ್ಲಿ 950 ಕೋಟಿ ರೂ ಮೀಸಲಾಗಿಡಲಾಗಿದ್ದು, ಇದನ್ನು ಪ್ರವಾಹ ಪೀಡಿತ ಪ್ರದೇಶದ ಪರಿಹಾರ ಹಾಗೂ ಇತರೆ ಕೆಲಸಗಳಿಗೆ ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

R Ashok 1

ನಿನ್ನೆ 5 ಜಿಲ್ಲೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಸಭೆ ನಡೆಸಲಾಗಿದೆ. ಇಂದು ನಾನು ಗೋಪಾಲಯ್ಯ ಸಕಲೇಶಪುರದ ದೋಣಿಗಾಲ್ ಗೆ ಭೇಟಿ ನೀಡಿದ್ದೇನೆ. ಹೆದ್ದಾರಿ ದುರಸ್ತಿ ಹಾಗೂ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಮುಂದಿನ 25 ದಿನದೊಳಗೆ ಹೆದ್ದಾರಿ ದುರಸ್ತಿ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಇಡೀ ರಾಜ್ಯದಲ್ಲಿ ಮಳೆಯ ಪರಿಸ್ಥಿತಿಯನ್ನು ನಿಭಾಯಿಸಲು ಮುಖ್ಯಮಂತ್ರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಹಾರ ಕಾರ್ಯಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ . ಇದನ್ನೂ ಓದಿ: ನನ್ನ ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿದ್ದು ಅತೀವ ಆನಂದ ನೀಡಿದೆ: ಮೀರಾಬಾಯಿ ಚಾನು

R Ashok 2 1

ಮಳೆಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ನೀಡಲಾಗುತ್ತದೆ. ಮನೆ ಕಳೆದುಕೊಂಡವರಿಗೆ ತಾತ್ಕಾಲಿಕವಾಗಿ 10,000 ಪರಿಹಾರ ನೀಡಲು ಸೂಚನೆ ನೀಡಿದ್ದೇನೆ. ಪೂರ್ಣ ಹಾನಿಯಾದ ಮನೆಗೆ ತಾತ್ಕಾಲಿಕ ದುರಸ್ತಿಗಾಗಿ ಒಂದು ಲಕ್ಷ ರೂ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿ ವಿವೇಚನೆಗೆ ಬಿಡಲಾಗಿದೆ ಎಂದು ಹೇಳಿದರು .

ನಾಳೆ ಸಿಎಂ ಯಡಿಯೂರಪ್ಪ ಅವರ ಜೊತೆ ಅತಿವೃಷ್ಟಿ ಹಾನಿ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದೇವೆ ಎಂದು ಹೇಳಿದ ಅವರು ಅತಿವೃಷ್ಟಿ ಪರಿಹಾರ ತೀವ್ರಗತಿಯಲ್ಲಿ ಜನರಿಗೆ ಒದಗಿಸುವ ನಿಟ್ಟಿನಲ್ಲಿ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಪರಿಹಾರ ಕಾರ್ಯದಲ್ಲಿ ತೊಡಗಬೇಕು ಎಂದು ಸೂಚನೆ ನೀಡಿದ್ದೇನೆ. ಇದನ್ನೂ ಓದಿ: ಉಡುಪಿಯಲ್ಲಿ ರೆಡ್ ಅಲರ್ಟ್- ಆತಂಕದ ನಡುವೆ ಸಮುದ್ರಕ್ಕಿಳಿದ ನಾಡದೋಣಿ ಮೀನುಗಾರರು

ಎಲ್ಲಾ ಸಚಿವರು ಆಯಾ ಜಿಲ್ಲೆಗಳಿಗೆ ತೆರಳಿ ಸೂಚನೆಯಂತೆ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಹಾಸನದಲ್ಲಿ 78 ಮನೆಗಳಿಗೆ ಭಾಗಶಃ ಹಾನಿಯಾಗಿದೆ, ಆರು ಮನೆಗಳು ಸಂಪೂರ್ಣ ಕುಸಿದಿದೆ. ಜಿಲ್ಲೆಯಲ್ಲಿ 50 ಸೇತುವೆ ಕೆರೆ ಕಟ್ಟೆಗಳಿಗೆ ಹಾನಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಶೇಕಡ 50ರಷ್ಟು ತುಂಬಿರುವ ಡ್ಯಾಂ ಗಳಿಂದ ನೀರು ಹೊರಬಿಡಲು ಸೂಚನೆ ನೀಡಲಾಗಿದ್ದು ಈಗಾಗಲೇ ರಾಜ್ಯದಲ್ಲಿ ಬಹುತೇಕ ಜಲಾಶಯಗಳು ಶೇಕಡ 50ರಷ್ಟು ತುಂಬಿದೆ ಎಂದು ಅಶೋಕ್ ಮಾಹಿತಿ ನೀಡಿದರು. ಇದನ್ನೂ ಓದಿ: ಮುಂದಿನ 4 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

Share This Article
Leave a Comment

Leave a Reply

Your email address will not be published. Required fields are marked *