ಬೆಂಗಳೂರು: ಕೈ ನಾಯಕರು ನಡೆಸುತ್ತಿರುವ ಪ್ರಜಾಪ್ರಭುತ್ವ ಉಳಿಸಿ ಹೋರಾಟವನ್ನು ವ್ಯಂಗ್ಯ ಮಾಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅತಿ ಮುಗ್ದರಾಗಿ ಬಿಟ್ಟರಾ ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದೆ.
ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟ್ಟರ್ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಅವರನ್ನ ಪ್ರಶ್ನೆ ಮಾಡಿದೆ. ಕುಮಾರಸ್ವಾಮಿ ಅವರೇ ಆಡಳಿತ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸ್ವಯಂ ಸೇರುವುದಕ್ಕೂ ಸಂವಿಧಾನ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಆಪರೇಷನ್ ಕಮಲದ ಮೂಲಕ ಚುನಾಯಿತ ಸರ್ಕಾರವನ್ನು ಕೆಡವುದಕ್ಕೂ ಇರುವ ವ್ಯತ್ಯಾಸ ಗೊತ್ತಿಲ್ಲದಷ್ಟು ಅತಿಮುಗ್ದರಾಗಿ ಬಿಟ್ಟಿರಾ ಎಂದು ಪ್ರಶ್ನಿಸಿದೆ.
Advertisement
ಕುಮಾರಸ್ವಾಮಿ ಅವರೇ ಆಡಳಿತ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸ್ವಯಂ ಸೇರುವುದಕ್ಕೂ ಸಂವಿಧಾನ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಆಪರೇಷನ್ ಕಮಲದ ಮೂಲಕ ಚುನಾಯಿತ ಸರ್ಕಾರವನ್ನು ಕೆಡವುದಕ್ಕೂ ಇರುವ ವ್ಯತ್ಯಾಸ ಗೊತ್ತಿಲ್ಲದಷ್ಟು ಅತಿಮುಗ್ದರಾಗಿ ಬಿಟ್ಟಿರಾ?
1/2
— Karnataka Congress (@INCKarnataka) July 29, 2020
Advertisement
ಕಾಂಗ್ರೆಸ್ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿ ಕುರ್ಚಿ ಮೇಲೆ ಕೂತು ಅಧಿಕಾರ ನಡೆಸುವಾಗ ನಿಮಗೆ ಕಾಂಗ್ರೆಸ್ ಪಕ್ಷದ ನೈತಿಕತೆ ಚೆನ್ನಾಗಿತ್ತು. ಅಧಿಕಾರ ಇಲ್ಲದಿದ್ದಾಗ ನೈತಿಕತೆ ಪ್ರಶ್ನೆ ಬರುತ್ತದೆಯೇ? ರಾಜ್ಯ ಸಂಕಷ್ಟದಲ್ಲಿರುವಾಗ ಅದೃಶ್ಯರು ಅಪ್ರಸ್ತುತರು ಆಗಿರುವ ನಿಮ್ಮ ಪಕ್ಷದ ನೈತಿಕತೆ ಏನು ಎಂದು ಕಾಂಗ್ರೆಸ್ ಕೇಳಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವ ಉಳಿಸಿ ಹೋರಾಟ ನಡೆಸ್ತಿರೋ ಕಾಂಗ್ರೆಸ್‍ಗೆ ನೈತಿಕತೆ ಇದೆಯಾ?- ಹೆಚ್‍ಡಿಕೆ
Advertisement
ಕಾಂಗ್ರೆಸ್ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿ ಕುರ್ಚಿ ಮೇಲೆ ಕೂತು ಅಧಿಕಾರ ನಡೆಸುವಾಗ ನಿಮಗೆ ಕಾಂಗ್ರೆಸ್ ಪಕ್ಷದ ನೈತಿಕತೆ ಚೆನ್ನಾಗಿತ್ತು, ಅಧಿಕಾರ ಇಲ್ಲದಿದ್ದಾಗ ನೈತಿಕತೆ ಪ್ರಶ್ನೆ ಬರುತ್ತದೆಯೇ?
ರಾಜ್ಯ ಸಂಕಷ್ಟದಲ್ಲಿರುವಾಗ ಅದೃಶ್ಯರು ಅಪ್ರಸ್ತುತರು ಆಗಿರುವ ನಿಮ್ಮ ಪಕ್ಷದ ನೈತಿಕತೆ ಏನು? 2/2
— Karnataka Congress (@INCKarnataka) July 29, 2020
Advertisement