ಧಾರವಾಡ: ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾದ ಬಾಲಕಿಯ ಗ್ರಾಮಕ್ಕೆ ತೆರಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೆರಳಿ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್‍ರ ಸಚಿವರು, ಬಾಲಕಿಗೆ ನ್ಯಾಯ ಕೊಡಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಆರೋಪಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ. ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
Advertisement
Advertisement
ಸಂತ್ರತ್ತೆಯ ಕುಟುಂಬಕ್ಕೆ ಪರಿಹಾರ ಧನ ನೀಡಲು ನಿಯಮಾವಳಿಗಳನ್ನು ಪರಿಶೀಲಿಸಲಾಗುವುದು, ಅವರ ಕುಟುಂಬದ ನೆರವಿಗಾಗಿ ವ್ಯಯಕ್ತಿಕವಾಗಿ ರೂ.50 ಸಾವಿರ ನೀಡುವುದಾಗಿ ಸಚಿವರು ತಿಳಿಸಿದರು. ಶಾಸಕ ಅಮೃತ ದೇಸಾಯಿ ಮಾತನಾಡಿ, ಕೃಷಿಕ ಕುಟುಂಬವಾಗಿರುವುದರಿಂದ ಘಟನೆಯಿಂದಾಗಿ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ. ಅವರ ಅನುಕೂಲಕ್ಕಾಗಿ ರೂ.50 ಸಾವಿರ ವ್ಯಯಕ್ತಿಕ ಸಹಾಯ ಧನ ನೀಡವುದಾಗಿ ಹೇಳಿದರು.
Advertisement
Advertisement
ಶಾಸಕ ಅರವಿಂದ ಬೆಲ್ಲದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಡಿವೈಎಸ್‍ಪಿ ರವಿ ನಾಯಕ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಏನಿದು ಪ್ರಕರಣ?: ಅಪ್ರಾಪ್ತೆ ಹೊಲದಲ್ಲಿನ ದೇವರಿಗೆ ಪೂಜೆ ಮಾಡಲು ತೆರಳಿದ್ದಳು. ಈ ವೇಳೆ ಗ್ರಾಮದ ಯುವಕ ಬೆದರಿಸಿ ಅತ್ಯಾಚಾರ ಮಾಡಿದ್ದನು. ಮರುದಿನ ಬಾಲಕಿ ತಾಯಿ ಬಳಿ ಹೊಲದಲ್ಲಿ ತನ್ನ ಮೇಲಾದ ಅತ್ಯಾಚಾರದ ಬಗ್ಗೆ ಹೇಳಿ ವಿಷ ಸೇವಿಸಿದ್ದಾಳೆ. ಕೂಡಲೇ ಕುಟುಂಬಸ್ಥರು ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಆಗಸ್ಟ್ 2ರಂದು ಸಾವನ್ನಪ್ಪಿದ್ದಳು.