ಬೆಂಗಳೂರು: ಅಥಣಿಯ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚುವರಿಯಾಗಿ ರೂ.36 ಕೋಟಿ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವುದಕ್ಕೆ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.
ಅಥಣಿಯಲ್ಲಿ ಕಾರ್ಯನಿವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು ಅಲ್ಲದೇ ವಿದ್ಯಾಲಯದ ಕಾಮಗಾರಿಗಳು ಸಹ ನಿಧಾನಗತಿಯಲ್ಲಿ ಆಗಿರುವುದರಿಂದ ಇಲ್ಲಿಯವರೆಗೆ ಪ್ರವೇಶಾತಿ ಆರಂಭವಾಗಿರಲಿಲ್ಲ. ಈ ಭಾಗದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಳೆದ ಅವಧಿಯಲ್ಲಿ ಘೋಷಣೆ ಮಾಡಿದ ಪಶುವೈದ್ಯಕೀಯ ಮಹಾವಿದ್ಯಾಲಯ ನಂತರದಲ್ಲಿ ಬಂದ ಸರ್ಕಾರಗಳು ಅನುದಾನ ನೀಡದಿರುವುದರಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಈ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರರೊಂದಿಗೆ ಗಂಭೀರವಾಗಿ ಚರ್ಚೆ ಸಹ ನಡೆಸಲಾಗಿತ್ತು.
Advertisement
ಮಹಾವಿದ್ಯಾಲದ ಪ್ರಥಮ ಹಾಗೂ ದ್ವಿತೀಯ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, MSVE (Minimum Standard of Veterinary Education Regulation 2016)ರ ಅನ್ವಯ ಬೇಕಾದ ಕನಿಷ್ಠ ಮೂಲಭೂತ ಸೌಕರ್ಯಗಳಾದ ಪ್ರಾಯೋಗಿಕ ಉಪಕರಣಗಳು, ಪಿಠೋಪಕರಣಗಳು ಹಾಗೂ ಇತರೇ ಸೌಕರ್ಯಗಳಿಗೆ ರೂ.137 ಕೋಟಿ ಮೊತ್ತ ಬೇಕಿದ್ದು, ಅದರಲ್ಲಿ ಈಗಾಗಲೇ ರೂ.50 ಕೋಟಿ ಬಿಡುಗಡೆ ಮಾಡಲಾಗಿದ್ದು, ಪರಿಷ್ಕೃತ ಹೆಚ್ಚುವರಿ ರೂ.82 ಕೋಟಿಯಲ್ಲಿ ರೂ.36 ಕೋಟಿ ಸದ್ಯ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
Advertisement
ಅಥಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ಮುಂಬೈ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತು ಈ ಭಾಗದ ನಿರುದ್ಯೋಗಿ ಯುವಕರಿಗೆ ಮತ್ತು ಮಹಿಳೆಯರಿಗೆ ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ಉದ್ಯೋಗಾವಕಾಶ ಕಂಡುಕೊಳ್ಳಲು ಸಹಕಾರಿಯಾಗಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಡಾ.ದೇವಿಶೆಟ್ಟಿ ವರದಿ, ಪರಿಶೀಲನೆ ಬಳಿಕ ಮುಂದಿನ ನಿರ್ಧಾರ: ಸುರೇಶ್ ಕುಮಾರ್