– ಚನ್ನಮ್ಮನ ಮುಖ ಕಾಣದ ರೀತಿ ದಟ್ಟವಾಗಿ ಆವರಿಸಿದ ಹುಳುಗಳು
ಹುಬ್ಬಳ್ಳಿ: ಸೂಕ್ತ ನಿರ್ವಹಣೆ ಹಾಗೂ ಸ್ವಚ್ಛತೆ ಕಾಪಾಡದ ಹಿನ್ನೆಲೆ ಹುಬ್ಬಳಿಯ ಐಕಾನ್, ಸುಪ್ರಸಿದ್ಧ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಪುತ್ಥಳಿಗೆ ಜೇನು ಹುಳುಗಳು ಮುತ್ತಿಕೊಂಡಿವೆ. ಚೆನ್ನಮ್ಮನ ಮುಖ ಕಾಣದಂತೆ ದಟ್ಟವಾಗಿ ಹುಳುಗಳು ಮುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಗರ ವಾಸಿಗಳು ಕಿಡಿಕಾರಿದ್ದಾರೆ.
Advertisement
ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಹುಬ್ಬಳ್ಳಿಯ ಜನನಿಬೀಡ ಪ್ರದೇಶವಾಗಿದ್ದು, ಎಲ್ಲರಿಗೂ ತಿಳಿದ ವಿಚಾರ. ಹುಬ್ಬಳ್ಳಿಯನ್ನು ಇದೇ ವೃತ್ತದಿಂದಲೂ ಹಲವರು ಗುರುತಿಸುತ್ತಾರೆ. ಹುಬ್ಬಳ್ಳಿಯ ಐಕಾನ್ ಎಂದೇ ಈ ವೃತ್ತವನ್ನು ಕರೆಯಲಾಗುತ್ತದೆ. ಇಂತಹ ಸುಪ್ರಸಿದ್ಧ ಹಾಗೂ ಜನನಿಬಿಡ ಪ್ರದೇಶದಲ್ಲಿನ ರಾಣಿ ಚೆನ್ನಮ್ಮ ಪುತ್ಥಳಿಯನ್ನು ನಿರ್ವಹಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ವಿಪರೀತ ಧೂಳು ಆವರಿಸಿದೆ. ಇದೀಗ ಜೇನು ಹುಳುಗಳು ಮುತ್ತಿವೆ.
Advertisement
Advertisement
ಕಿತ್ತೂರು ಚೆನ್ನಮ್ಮನ ಮೂರ್ತಿಯ ಮುಖಕ್ಕೆ ಜೇನು ಹುಳುಗಳು ಮುತ್ತಿಕ್ಕಿಕೊಂಡ ಪರಿಣಾಮ ಚೆನ್ನಮ್ಮನ ಮುಖ ದರ್ಶನವೇ ಕಾಣುತ್ತಿರಲಿಲ್ಲ. ಹಲವರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದರೆ, ಇನ್ನೂ ಹಲವರು ಆಶ್ಚರ್ಯವೆಂಬಂತೆ ನೋಡುತ್ತಿದ್ದರು. ಪಾಲಿಕೆ ಅಧಿಕಾರಿಗಳು ಜೇನು ಹುಳುಗಳನ್ನು ತೆರವುಗೊಳಿಸಿ, ಪುತ್ಥಳಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಇನ್ನಾದರೂ ಸುಪ್ರಸಿದ್ಧ ಪುತ್ಥಳಿಯನ್ನು ಸರಿಯಾಗಿ ನಿರ್ವಹಿಸಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.