ಬೆಂಗಳೂರು: ಬಾಲಿವುಡ್ ನಟ ಸಂಜಯ್ ದತ್ ನಟಿಸುತ್ತಿರುವ ಕೆಜಿಎಫ್-2 ಚಿತ್ರದ ಚಿತ್ರೀಕರಣಕ್ಕೆ ನೀಡಿರುವ ಅನುಮತಿಯನ್ನು ರದ್ದುಪಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಹುಬ್ಬಳ್ಳಿಯ ವಕೀಲ ಜಿ. ಶಿವಶಂಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು. ಈ ವೇಳೆ ಶಿಕ್ಷೆಗೊಳಗಾದವರು ನಟನೆ ಮಾಡಬಾರದು ಎಂದು ಯಾವ ಕಾನೂನಿನಲ್ಲಿ ಹೇಳಿದೆ? ಅರ್ಜಿದಾರರೊಬ್ಬರ ನಿಲುವೇ ಇಡೀ ಕರ್ನಾಟಕದ ಜನತೆಯ ನಿಲುವು ಎಂದು ಹೇಗೆ ಸಾಬೀತುಪಡಿಸುತ್ತೀರಿ ಎಂದು ಅರ್ಜಿದಾರರ ಪರ ವಕೀಲರನ್ನು ಕೋರ್ಟ್ ಪ್ರಶ್ನಿಸಿತು.
Advertisement
Advertisement
ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ಸಿಗದ ಕಾರಣ ಈ ಅರ್ಜಿಗೆ ಕಾನೂನಾತ್ಮಕ ಆಧಾರವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತು.
Advertisement
ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೆಜಿಎಫ್-2 ಚಿತ್ರದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಮತ್ತು ನಟ ಸಂಜಯ್ ದತ್ ಅವರನ್ನು ಪ್ರತಿವಾದಿ ಮಾಡಲಾಗಿತ್ತು.
Advertisement
ಅರ್ಜಿಯಲ್ಲಿ ಏನಿತ್ತು?
ಕೆಜಿಎಫ್-2 ಚಿತ್ರದಲ್ಲಿ ಟಾಡಾ ಅಪರಾಧಿಯಾದ ಬಾಲಿವುಡ್ ನಟ ಸಂಜಯ್ ದತ್ ನಟಿಸುತ್ತಿದ್ದಾರೆ. ಸಂಜಯ್ ದತ್‌ಗೆ 10 ವರ್ಷ ಜೈಲು ಶಿಕ್ಷೆಯಾಗಿತ್ತು. ಈ ವಿಚಾರ ತಿಳಿದಿದ್ದರೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಂಜಯ್ ದತ್ ನಟನೆಯ ಕೆಜಿಎಫ್-2 ಚಿತ್ರದ ಚಿತ್ರೀಕರಣಕ್ಕೆ ಹಾಗೂ ಬಿಡುಗಡೆಗೆ ಅನುಮತಿ ನೀಡಿದ್ದಾರೆ.
ಜನರಿಂದ ಹೆಚ್ಚು ಹಣ ಗಳಿಸಬೇಕೆಂಬ ಉದ್ದೇಶದಿಂದ ಸಂಜಯ್ ದತ್ ಅವರನ್ನು ಹಾಕಿಕೊಂಡು ಚಿತ್ರ ನಿರ್ಮಾಣ ಮಾಡಲಾಗುತ್ತಿದೆ. ಇದು ಜನತೆಯ ಘನತೆಗೆ ಧಕ್ಕೆಯಾಗಿದೆ. ಕೆಜಿಎಫ್-2 ಚಿತ್ರೀಕರಿಸಲು ಹೊಂಬಾಳೆ ಫಿಲಿಂಸ್‌ಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು. ಈ ಅರ್ಜಿ ಇತ್ಯರ್ಥವಾಗುವರೆಗೂ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.