ಬೆಂಗಳೂರು: ಇಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಭಾರೀ ಹೈಡ್ರಾಮಾ ನಡೆಯುತ್ತಿದೆ. 7 ಮಂದಿ ಸಚುವರಾಗಿ ಪ್ರಮಾಣ ವಚನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಬೆನ್ನಲ್ಲೇ ಸ್ವಪಕ್ಷದವರೇ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಈ ಸಂಬಂಧ ಶಾಸಕ ಸತೀಶ್ ರೆಡ್ಡಿ ಟ್ವೀಟ್ ಮಾಡಿ ಬಿಎಸ್‍ವೈ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ ಇದೇ ವೇಳೆ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ.
Advertisement
ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಶ್ರೀ ಅನಂತಕುಮಾರ್ ಜಿ ರವರ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ @BSYBJP @JPNadda @blsanthosh
— M Satish Reddy (@msrbommanahalli) January 13, 2021
Advertisement
ಟ್ವೀಟ್‍ನಲ್ಲೇನಿದೆ..?
ರೀ ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಶ್ರೀ ಅನಂತಕುಮಾರ್ ಜಿ ರವರ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Advertisement
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾನಾಡಿದ ಸಿಎಂ, ಇಂದು 7 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್ ಶಂಕರ್, ಸಿ.ಪಿ ಯೋಗೇಶ್ವರ್ ಹಾಗೂ ಎಸ್. ಅಂಗಾರ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ಶಾಸಕ ಮುನಿರತ್ನ, ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದು, ಸಿಎಂ ವಚನ ಭ್ರಷ್ಟರಾದ್ರಾ ಎಂದು ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.