ಬೆಂಗಳೂರು: ಸಂಡೇ ಲಾಕ್‍ಡೌನ್ ಆದರೂ ನಗರದಲ್ಲಿ ಜನರು ಸುಮ್ಮನೇ ಓಡಾಡುತ್ತಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರ ವಾಹಗಳನ್ನು ಸೀಜ್ ಮಾಡುತ್ತಿದ್ದಾರೆ.
ಕೆಂಗೇರಿ ಪೊಲೀಸರು ಅನಗತ್ಯವಾಗಿ ಓಡಾಟ ಮಾಡುವವರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಈ ಮೂಲಕ ಕೆಂಗೇರಿ ಚೆಕ್‍ಪೋಸ್ಟ್ ನಲ್ಲಿ ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನ ಪೊಲೀಸರು ಸೀಜ್ ಮಾಡುತ್ತಿದ್ದಾರೆ.
Advertisement
Advertisement
ಪೊಲೀಸರು ರಸ್ತೆಯ ಎರಡು ಬದಿಯಲ್ಲಿ ಓಡಾಡುತ್ತಿರುವ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ. ತಪಾಸಣೆ ವೇಳೆ ಅನಗತ್ಯವಾಗಿ ಓಡಾಟ ಮಾಡುತ್ತಿರುವುದು ಕಂಡು ಬಂದರೆ ಅಂತಹ ವಾಹನಗಳನ್ನು ಪೊಲೀಸರು ಸೀಜ್ ಮಾಡುತ್ತಿದ್ದಾರೆ. ಬೆಳಗ್ಗೆಯಿಂದ ಕಾರು, ಬೈಕ್‍ಗಳನ್ನು ಕೆಂಗೇರಿ ಪೊಲೀಸರು ಸೀಜ್ ಮಾಡಿದ್ದಾರೆ.
Advertisement
Advertisement
ಕೊರೊನಾ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ ಕರ್ಫ್ಯೂ ಜಾರಿಯಾಗಿದೆ. ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಲಾಕ್‍ಡೌನ್ ಜಾರಿಯಲ್ಲಿರುತ್ತದೆ. ಈ ವೇಳೆ ಜನರು ಅನಗತ್ಯವಾಗಿ ಯಾರೂ ಹೊರಗಡೆ ಬಂದು ಓಡಾಡಬಾರದು. ಹಾಲು, ದಿನಸಿ, ತರಕಾರಿ ಮತ್ತು ಔಷಧಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಟ್ಟಿದೆ. ಆದರೆ ಕೆಲವರು ಅನಗತ್ಯವಾಗಿ ಓಡಾಡುತ್ತಿದ್ದಾರೆ.