ಬೆಂಗಳೂರು: ಸಾರ್ವಜನಿಕರ ಅಭಿಪ್ರಾಯದ ಹಿನ್ನೆಲೆ ರಾತ್ರಿ ಕರ್ಫ್ಯೂ ಆದೇಶವನ್ನು ಹಿಂಪಡೆಯಲಾಗಿದ್ದು, ಅನಗತ್ಯವಾಗಿ ಸಂಚರಿಸದೆ ಸರ್ಕಾರ ವಿಧಿಸಿರುವ ಕೋವಿಡ್-19 ನಿಯಮಗಳನ್ನು ಪಾಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬ್ರಿಟನ್ ಮುಂತಾದ ದೇಶಗಳಲ್ಲಿ ಪತ್ತೆಯಾದ ಕೋವಿಡ್ ರೂಪಾಂತರ ವೈರಾಣು ಹರಡುವಿಕೆ ನಿಯಂತ್ರಿಸಲು, ತಜ್ಞರ ಸಲಹೆಯಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ತೀರ್ಮಾನಿಸಲಾಗಿತ್ತು. ಸಾರ್ವಜನಿಕ ವಲಯದ ಅಭಿಪ್ರಾಯಗಳನ್ನು ಪರಿಗಣಿಸಿ, ಸಚಿವರುಗಳ ಮತ್ತು ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ. (1/3)
— CM of Karnataka (@CMofKarnataka) December 24, 2020
Advertisement
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬ್ರಿಟನ್ ಮುಂತಾದ ದೇಶಗಳಲ್ಲಿ ಪತ್ತೆಯಾದ ಕೋವಿಡ್ ರೂಪಾಂತರ ವೈರಾಣು ಹರಡುವಿಕೆ ನಿಯಂತ್ರಿಸಲು ತಜ್ಞರ ಸಲಹೆಯಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ತೀರ್ಮಾನಿಸಲಾಗಿತ್ತು. ಸಾರ್ವಜನಿಕ ವಲಯದ ಅಭಿಪ್ರಾಯಗಳನ್ನು ಪರಿಗಣಿಸಿ, ಸಚಿವರುಗಳ ಮತ್ತು ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂ ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯನ್ನು ಸರಳವಾಗಿ ಆಚರಿಸಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚು ಗುಂಪುಗೂಡದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. (2/3)
— CM of Karnataka (@CMofKarnataka) December 24, 2020
Advertisement
ಕ್ರಿಸ್‍ಮಸ್ ಮತ್ತು ಹೊಸ ವರ್ಷಾಚರಣೆಯನ್ನು ಸರಳವಾಗಿ ಆಚರಿಸಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚು ಗುಂಪುಗೂಡದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
Advertisement
ಅನಗತ್ಯವಾಗಿ ಸಂಚರಿಸದೆ ಹಾಗೂ ಸರ್ಕಾರ ವಿಧಿಸಿರುವ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಕೋವಿಡ್ ಸಾಂಕ್ರಾಮಿಕದ ಹರಡುವಿಕೆಯನ್ನು ತಡೆಯಲು ಕೋರಿದೆ. (3/3)
— CM of Karnataka (@CMofKarnataka) December 24, 2020
ಅನಗತ್ಯವಾಗಿ ಸಂಚರಿಸದೆ ಹಾಗೂ ಸರ್ಕಾರ ವಿಧಿಸಿರುವ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೋವಿಡ್ ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಯಬೇಕೆಂದು ಮನವಿ ಮಾಡಿದ್ದಾರೆ.