ಹುಬ್ಬಳ್ಳಿ: ಅನೈತಿಕ ಸಂಬಂಧ ಮುಂದುವರಿಸಿಕೊಂಡು ಹೋಗಲು ಅನುಕೂಲವಾಗುತ್ತದೆ ಎಂದು ತನ್ನೆರಡು ಮಕ್ಕಳನ್ನು ಕೊಲೆಗೈದ ತಾಯಿಗೆ ಇಲ್ಲಿನ ಐದನೇ ಸೆಷನ್ಸ್ ಕೋರ್ಟ್ ಬುಧವಾರ ಜೀವಾವಧಿ ಜೈಲು ಶಿಕ್ಷೆ ಮತ್ತು 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಹಳೇಹುಬ್ಬಳ್ಳಿ ನವ ಅಯೋಧ್ಯಾನಗರದ ಪ್ರೇಮಾ ಅಲಿಯಾಸ್ ಚೈತ್ರಾ ಹುಲಕೋಟಿ ಶಿಕ್ಷೆಗೆ ಒಳಗಾದ ಮಹಿಳೆ. 2018ರ ಡಿ.11ರಂದು ಪ್ರೇಮಾ ನಾಲ್ಕು ವರ್ಷದ ಹೆಣ್ಣು ಮಗು ರೋಹಿಣಿ ಮತ್ತು ಐದು ವರ್ಷ ಮಗ ರೋಹಿತ್‍ನನ್ನು ಶಾಲೆಯ ಗುರುತು ಪತ್ರದ ದಾರ ಮತ್ತು ವೇಲ್‍ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಳು. ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಅವಳ ಪತಿ ಪರಶುರಾಮ ಹುಲಕೋಟಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕಿ ಸುಮಿತ್ರಾ ಅಂಚಟಗೇರಿ ವಾದ ಮಂಡಿಸಿದ್ದರು.