Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮಾದ್ಯತೆ: ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮಾದ್ಯತೆ: ಬಿಎಸ್‍ವೈ

Districts

ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮಾದ್ಯತೆ: ಬಿಎಸ್‍ವೈ

Public TV
Last updated: July 10, 2021 6:21 pm
Public TV
Share
4 Min Read
Kalaburagi bsy3
SHARE

– ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣ ರಾಜ್ಯದ ಇತಿಹಾಸದಲ್ಲೇ ಮೊದಲ ಕಟ್ಟಡ

ಕಲಬುರಗಿ: ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಲಬುರಗಿಯಲ್ಲಿ ಹೇಳಿದ್ದಾರೆ.

Kalaburagi bsy4 medium

ನೂತನ ಮಾದರಿಯ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣಕ್ಕೆ ಅಡಿಗಲ್ಲು ಹಾಕಿ ಮಾತನಾಡಿದ ಅವರು, ನಗರದ ಎಂ.ಎಸ್.ಕೆ ಮಿಲ್ ವಾಣಿಜ್ಯ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರ ಇವರ ಜಂಟಿ ಅನುದಾನದಡಿಯಲ್ಲಿ 2 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದೆ. ಸುಮಾರು 26.30 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಮಾದರಿಯ ಕಾಯಿಪಲ್ಲೆ ಮಾರುಕಟ್ಟೆ ನಿರ್ಮಾಣ ಮಾಡಲಾಗುತ್ತಿದೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಇಂದು ಕಲಬುರಗಿಯಲ್ಲಿ ನೂತನ ಮಾದರಿಯ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ, ಲೋಕೋಪಯೋಗಿ ಭವನ ಉದ್ಘಾಟನೆ, ಹಲವು ಯೋಜನೆಗಳ ಫಲಾನುಭವಿಗಳಿಗೆ ನೆರವಿನ ಚೆಕ್ ವಿತರಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. pic.twitter.com/Lcn4sr1FqP

— B.S. Yediyurappa (@BSYBJP) July 10, 2021

ಅನ್ನದಾತ ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ದೊರಕಬೇಕು ಎಂಬ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಹೂವು ಬೆಳೆಗಾರರಿಗೆ ಹಾಗೂ ತರಕಾರಿ ಮಾರಾಟಗಾರರು ಸೂಕ್ತ ಮಾರುಕಟ್ಟೆ ಸಿಗದೆ ಕಷ್ಟ ಅನುಭವಿಸಿದ್ದರು. ಇದನ್ನು ಅರಿತು ಕೇಂದ್ರ ಸರ್ಕಾರ ದೂರದ ಪ್ರದೇಶದಲ್ಲಿಯೂ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡಲು ಸಾಗಾಣಿಕೆಗೆ ಕಿಸಾನ್ ರೈಲು ಯೋಜನೆ ಜಾರಿಗೆ ತಂದಿದ್ದು, ರೈತರಿಗೆ ತುಂಬಾ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ರೈತರ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ @BSYBJP ರವರು ಇಂದು ಕಲಬುರಗಿಯಲ್ಲಿ ಲೋಕೋಪಯೋಗಿ ಭವನ ಉದ್ಘಾಟನೆ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಹಲವು ಯೋಜನೆಯ ಫಲಾನುಭವಿಗಳಿಗೆ ನೆರವಿನ ಚೆಕ್ ವಿತರಿಸಿದರು.

ಉಪಮುಖ್ಯಮಂತ್ರಿ @GovindKarjol, (1/2) pic.twitter.com/WpHmQmMB15

— CM of Karnataka (@CMofKarnataka) July 10, 2021

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 20 ಕೊಟಿ ರೂ. ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರದಿಂದ 6.30 ಕೋಟಿ ರೂ. ಹೀಗೆ ಒಟ್ಟು 26.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣ ರಾಜ್ಯದ ಇತಿಹಾಸದಲ್ಲೇ ಮೊದಲ ಕಟ್ಟಡವಾಗಿದ್ದು, ತುಂಬಾ ಸಂತೋಷದಿಂದ ಅಡಿಗಲ್ಲು ನೆರವೇರಿಸಿದ್ದೇನೆ. ಈ ತರಹದ ಮಾದರಿ ತರಕಾರಿ ಮಾರುಕಟ್ಟೆ ನಿರ್ಮಾಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೂ ತರಲಾಗುವುದು ಎಂದು ತಿಳಿಸಿದ್ದಾರೆ.

Kalaburagi bsy medium

ಕಲಬುರಗಿ ನಗರದ ಕಣ್ಣಿ ಮಾರುಕಟ್ಟೆಯಲ್ಲಿ ಸಿದ್ದಗೊಳ್ಳಲಿರುವ ನೂತನ ಕಾಯಿಪಲ್ಲೆ ಮಾರುಕಟ್ಟೆಯಿಂದ ಈ ಭಾಗದ ರೈತರ ಹಾಗೂ ಜನರ ಬಹುದಿನಗಳ ಕನಸು ನನಸಾಗಲಿದ್ದು, ರಸ್ತೆ ಬದಿಯಲ್ಲಿ ತರಕಾರಿ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದ ಮತ್ತು ಮಳೆಗಾಲದಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದ ರೈತಾಪಿ ವರ್ಗಕ್ಕೆ ಇದರಿಂದ ನೆಮ್ಮದಿ ಸಿಕ್ಕಿದೆ. ರಸ್ತೆಯುದ್ದಕ್ಕು ಜನ ಗುಂಪಾಗಿ ಸೇರುವ ಕಾರಣ ಅಪಘಾತವಾಗುವ ಸಾಧ್ಯತೆಗಳನ್ನು ಮನಗಂಡು ನೂತನ ತರಕಾರಿ ಮಾರುಕಟ್ಟೆ ಸ್ಥಾಪಿಸಲಾಗುತ್ತಿದೆ ಎಂದಿದ್ದಾರೆ.

Kalaburagi bsy2 medium

ರಾಜ್ಯದಲ್ಲಿ ರೈತ ಬೆಳೆದ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ದೊರಕಿಸುವಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕೃಷಿ ನಮ್ಮ ಆದ್ಯತಾ ವಲಯವಾಗಿದ್ದು, ಕೃಷಿಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಿದೆ. ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‍ಗೆ ತಲಾ 10000 ರೂಪಾಯಿಗಳಂತೆ 20 ಸಾವಿರ ರೈತರಿಗೆ ಪರಿಹಾರ ನೀಡಲಾಗಿದೆ. ಅದೇ ರೀತಿ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಗರಿಷ್ಠ 1 ಹೆಕ್ಟೇರ್‍ಗೆ ತಲಾ 10000 ರೂಪಾಯಿಗಳಂತೆ 69000 ಸಾವಿರ ರೈತರಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದರು. ಇದನ್ನೂ ಓದಿ:  ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ: ಡಾ.ಕೆ ಸುಧಾಕರ್ 

ನೂತನ ತರಕಾರಿ ಮಾರುಕಟ್ಟೆ ಕಾಂಪ್ಲೆಕ್ಸ್ ಬೇಸ್‍ಮೆಂಟ್ ಮಹಡಿ, ನೆಲ ಮಹಡಿ ಹಾಗೂ ಮೊದಲನೇ ಮಹಡಿ ಒಳಗೊಂಡಿದೆ. ಬೇಸ್‍ಮೆಂಟ್ ಮಹಡಿಯಲ್ಲಿ ವಾಹನ ನಿಲುಗಡೆ, ಲಿಫ್ಟ್, ಸ್ಟೇರ್‍ಕೇಸ್, ಸಂಪ್ ಟ್ಯಾಂಕ್, ಎಲೆಕ್ಟ್ರೀಕಲ್ ಕೋಣೆ ಇರಲಿದೆ. ನೆಲ ಮಹಡಿಯಲ್ಲಿ 62 ಅಂಗಡಿಗಳು, ತರಕಾರಿ ಮಾರಾಟಕ್ಕೆ 192 ಮಳಿಗೆ, ಸಗಟು ವ್ಯಾಪಾರ ಹರಾಜು ಪ್ರಕ್ರಿಯೆಗೆ ಪ್ಲಾಟ್‍ಫಾರ್ಮ್, ಘನತ್ಯಾಜ್ಯ ಸಂಗ್ರಹಣೆಗೆ ಸ್ಥಳ, ಕೋಲ್ಟ್ ಸ್ಟೋರೇಜ್ ಕೋಣೆ ಹಾಗೂ ಶೌಚಾಲಯ ಇರಲಿವೆ. ಮೊದಲನೇ ಮಹಡಿಯಲ್ಲಿ 47 ಅಂಗಡಿಗಳು, ಇತರೆ ಕಾರ್ಯಾಲಯ, ಬ್ಯಾಂಕ್ ಇರಲಿದ್ದು ಒಟ್ಟಾರೆ ಸಂಕೀರ್ಣದಲ್ಲಿ 301 ಅಂಗಡಿಗಳಿರಲಿವೆ ಎಂದು ವಿವರವಾಗಿ ತಿಳಿಸಿದ್ದಾರೆ.

Kalaburagi bsy5 medium

ಕಾರ್ಯಕ್ರಮದಲ್ಲಿ ಭಾಗವಹಿಸಿದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ 600 ಕೋಟಿ ರೂ.ಗಳ ವೆಚ್ಚದಲ್ಲಿ ದಿನದ 24 ಗಂಟೆಯು ಕುಡಿಯುವ ನೀರಿನ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದೆ. ಇದಲ್ಲದೆ ಕಲಬುರಗಿ ಮಹಾನಗರ ಪ್ರದೇಶದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಗಾಗಿ ಇಂದು 41 ವಾಹನಗಳನ್ನು ಸಹ ಲೋಕಾರ್ಪಣೆ ಮಾಡಲಾಗಿದೆ ಎಂದರು.

Kalaburagi bsy9 medium

ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಮಾತನಾಡಿ, ಸರ್ಕಾರ ನುಡಿದಂತೆ ನಡೆದಿದೆ. ಈ ನೂತನ ಮಾರುಕಟ್ಟೆಯಿಂದ ಪ್ರದೇಶದ ರೈತರು ಸುಲಲಿತವಾಗಿ ವ್ಯಾಪಾರ ಮಾಡಬಹುದು. ಮಳಿಗೆಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಲಿ ಎಂದು ಹೇಳಿದರು.

TAGGED:bjpBS YediyurappaKalaburagimarketpublictvಕಲಬುರಗಿಪಬ್ಲಿಕ್ ಟಿವಿಮಾರುಕಟ್ಟೆರೈತರುಸರ್ಕಾರ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
2 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 hours ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
3 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
3 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
3 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?