ಬೆಂಗಳೂರು: ಕೊರೊನಾ ಎರಡನೇ ಅಲೆಯ ಅಬ್ಬರಕ್ಕೆ ಬ್ರೇಕ್ ಹಾಕಲು ಸರ್ಕಾರ ಅನಿವಾರ್ಯವಾಗಿ ಇಡೀ ರಾಜ್ಯಕ್ಕೆ ಲಾಕ್ ಡೌನ್ ಜಾರಿಗೆ ತಂದಿತ್ತು. ಬಳಿಕ ಕೊರೊನಾ ಕೇಸ್‍ಗಳ ಸಂಖ್ಯೆ ಕಡಿಮೆ ಆಗುವುದಕ್ಕೆ ಶುರುವಾದ ನಂತರ ಸರ್ಕಾರ ಹಂತ ಹಂತವಾಗಿ ಅನ್‍ಲಾಕ್ ಘೋಷಿಸುತ್ತಾ ಬಂದಿದೆ.
Advertisement
ಮೂರನೇ ಹಂತದ ಅನ್‍ಲಾಕ್ ಪ್ರಕ್ರಿಯೆ ಕಳೆದ ಸೋಮವಾರದಿಂದ ಜಾರಿಗೆ ಬಂದಿದೆ. ಬಹುತೇಕ ಶೇ 90ರಷ್ಟು ಚಟುವಟಿಕೆಗಳು ಈಗ ಮುಕ್ತವಾಗಿದೆ. ಇಂದು ಮೂರನೇ ಹಂತದ ಲಾಕ್ ಡೌನ್ ಸಡಿಲಿಕೆಯ ಮೊದಲ ಭಾನುವಾರವಾಗಿದ್ದು, ಕೆ.ಆರ್ ಮಾರ್ಕೆಟ್ ನಲ್ಲಿ ಬೆಳ್ಳಂಬೆಳಗ್ಗೆಯೇ ಹೂವಿನ ವ್ಯಾಪಾರ ಜೋರಾಗಿ ನಡೆದಿದೆ. ಗ್ರಾಹಕರು ಮತ್ತು ವ್ಯಾಪಾರಿಗಳು ಕೊರೊನಾ ನಿಯಮವಾಗಿರುವ ಸಾಮಾಜಿಕ ಅಂತರವನ್ನು ಸಂಪೂರ್ಣವಾಗಿ ಮರೆತು ವ್ಯಾಪಾರದಲ್ಲಿ ತೊಡಗಿದ್ದಾರೆ.
Advertisement
Advertisement
ಬೆಳಗ್ಗೆಯೇ ಮಾರ್ಷಲ್ ಗಳು ಸಹ ಕಾರ್ಯಾರಂಭ ಮಾಡಿದ್ದು, ಮಾರ್ಷಲ್ ಗಳನ್ನು ನೋಡಿದ ಕೂಡಲೇ ಮಾಸ್ಕ್ ಸರಿಯಾಗಿ ಹಾಕಿಕೊಳ್ಳುವ ಕಡೆ ಜನ ಗಮನ ವಹಿಸಿದ್ದಾರೆ. ಮಾರ್ಷಲ್ ಇದ್ದಾರೆ ಎಂಬ ಕಾರಣಕ್ಕೆ ನಿಯಮ ಪಾಲನೆ ಮಾಡುವುದಲ್ಲ, ಜನ ಸ್ವಪ್ರೇರಣೆಯಿಂದ ಕೊರೊನಾ ನಿಯಮಗಳ ಪಾಲನೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಮತ್ತೆ ಕೊರೊನಾ ರಣಕೇಕೆ ಶುರುವಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಬಹುದಾಗಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪತ್ನಿಯ ಮೂಗು ಕತ್ತರಿಸಿದ ಪತಿ
Advertisement