ಬೆಂಗಳೂರು: ನಾಳೆಯಿಂದ ಬಸ್ ಸಂಚಾರ ಆರಂಭವಾಗ್ತಿದೆ. ರಾಜ್ಯದ ನಾಲ್ಕು ನಿಗಮಗಳಾದ ಕೆಎಸ್‍ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆಯ ಬಸ್ ಗಳು ಕಾರ್ಯಾಚರಣೆಗೊಳ್ಳುತ್ತಿವೆ. ಬಸ್ ಸಂಚಾರ ಆರಂಭವಾಯ್ತು ಅಂತಾ ರಿಲಾಕ್ಸ್ ಆಗುವ ಸಮಯದಲ್ಲಿ ಸಾರಿಗೆ ನೌಕರರಿಂದ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಮತ್ತೆ ಮತ್ತೇ ಸಾರಿಗೆ ಪ್ರೋಟೆಸ್ಟ್ ನಡೆಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ.
Advertisement
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್, ಜುಲೈ 1ರವರೆಗೆ ಸರ್ಕಾರಕ್ಕೆ ಡೆಡ್ ಲೈನ್ ನೀಡಲಾಗಿದೆ. ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳಿಗೆ ಸ್ಪಂದಿಸದೇ ಇದ್ರೆ ಜುಲೈ 1 ರಿಂದ ಮತ್ತೆ ಸಾರಿಗೆ ಮುಷ್ಕರ ಆರಂಭಿಸುವುದಾಗಿ ಗುಡುಗಿದ್ದಾರೆ.
Advertisement
Advertisement
ಕಳೆದ ಬಾರಿ ಏಪ್ರಿಲ್ 7 ರಿಂದ 22 ರವರೆಗೆ 15 ದಿನ ಸಾರಿಗೆ ಪ್ರೊಟೆಸ್ಟ್ ನಡೆದಿತ್ತು. ನಂತರ ಹೈಕೋರ್ಟ್ ಮಧ್ಯೆ ಪ್ರವೇಶದಿಂದ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು. ಇದೀಗ ಮತ್ತೆ ಪ್ರತಿಭಟನೆಯ ಕೂಗು ಕೇಳಿಬಂದಿದೆ. ಸರ್ಕಾರ ಕೊಟ್ಟ ಮಾತಿನಂತೆ ಆರನೇ ವೇತನ ಆಯೋಗ ಜಾರಿಗೆ ತರಬೇಕು. ಇಲ್ಲದಿದ್ದರೇ ಈ ಬಾರಿ ಸಾರಿಗೆ ನೌಕರರು ಅಷ್ಟೇ ಅಲ್ಲದೇ ಹೆಂಡತಿ, ಮಕ್ಕಳ ಜೊತೆಗೂಡಿ ಕುಟುಂಬ ಸಮೇತರಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ – ಕುಮಾರಸ್ವಾಮಿ ಆಕ್ರೋಶ
Advertisement
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವ ಜನ ಅರೆಕೂಲಿಯಲ್ಲಿ ಕೆಲಸ ಮಾಡಿದ್ದಾರೆ. ಅವರಿಗೆ ಸರಿಯಾದ ನ್ಯಾಯಯುತ ವೇತನ ನೀಡಿ. ಸರ್ಕಾರ ಆರನೇ ವೇತನ ಆಯೋಗವನ್ನು ಜಾರಿ ಮಾಡುತ್ತೇವೆ ಎಂದಿತ್ತು. ಕಳೆದ ಬಾರಿ 15 ದಿನ ಪ್ರತಿಭಟನೆ ನಡೆಸಿದ್ದೇವೆ. ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಈಗಾಗಲೇ ಸಾರಿಗೆ ನೌಕರರನ್ನು ಅಮಾನತು, ವರ್ಗಾವಣೆ ಮಾಡಿದ್ದಾರೆ. ಎರಡು ತಿಂಗಳ ಸಂಬಳ ಕೊಡಬೇಕು. ಸಾವಿರ ರೂಪಾಯಿ ಸಂಬಳ ಕೊಡೋ ಕೆಲಸ ಮಾಡ್ತಿದೆ. ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯ ತರುತ್ತಿದ್ದೇವೆ. ಸಾರಿಗೆ ನೌಕರರ ಕುಟುಂಬದವರೊಂದಿಗೆ ಪ್ರತಿಭಟನೆ ಮಾಡ್ತೇವೆ. ಹೆಂಡತಿ, ಮಕ್ಕಳನೊಂದಿಗೆ ಸಾರಿಗೆ ನೌಕರರು ಪ್ರತಿಭಟಿಸುತ್ತಾರೆ. ಜೊತೆಗೆ ಸರ್ಕಾರ ವಿಶೇಷವಾದ ಪ್ಯಾಕೇಜ್ ಕೊಟ್ಟು ಸಾರಿಗೆ ಇಲಾಖೆಯನ್ನು ಉಳಿಸುವ ಕೆಲಸ ಮಾಡಬೇಕು. ಜುಲೈ ಒಂದನೇ ತಾರೀಖಿನ ಒಳಗೆ ಸಭೆ ನಡೆಸಿ, ಮುಂದಿನ ಹೋರಾಟದ ರೂಪುರೇಷೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಯಾಣಿಕರ ಪಾಸ್ ಅವಧಿ ವಿಸ್ತರಿಸಿದ ಬಿಎಂಟಿಸಿ