– ಪೊಲೀಸ್ ಪೇದೆಗೆ ಗಂಭೀರ ಗಾಯ
ಹಾಸನ: ಸರಣಿ ಅಪಘಾತ ಸಂಭವಿಸಿದ್ದು, ಬಲ್ಕರ್ ಹಾಗೂ ಮಹೀಂದ್ರ ಪಿಕ್‍ಅಪ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತ ಪರಿಶೀಲನೆ ವೇಳೆ ಮತ್ತೊಂದು ಮಹೀಂದ್ರ ಪಿಕ್‍ಅಪ್ ವಾಹನ ಡಿಕ್ಕಿ ಹೊಡೆದಿದೆ. ಎರಡನೇ ವಾಹನ ಡಿಕ್ಕಿಯಿಂದಾಗಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪೊಲೀಸ್ ಪೇದೆಗೆ ಗಂಭೀರ ಗಾಯವಾಗಿದೆ.
ಜಿಲ್ಲೆಯ ಬೇಲೂರು ತಾಲೂಕಿನ ಹಗರೆ ಬಳಿ ಈ ಸರಣಿ ಅಪಘಾತ ಸಂಭವಿಸಿದೆ. ಸಾವನ್ನಪ್ಪಿದ ಲಾರಿ ಚಾಲಕನ ಗುರುತು ಪತ್ತೆಯಾಗಿಲ್ಲ. ತೀವ್ರ ಗಾಯಗೊಂಡ ಪೊಲೀಸ್ ಪೇದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಲು ಬಲ್ಕರ್ ಹಾಗೂ ಮಹೀಂದ್ರ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಮಹೀಂದ್ರ ಪಿಕ್‍ಅಪ್ ವಾಹನ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ರಸ್ತೆ ಬದಿ ನಿಂತಿದ್ದ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಪರಶೀಲಿಸುತ್ತಿದ್ದ ಹಳೇಬೀಡು ಠಾಣೆ ಪೊಲೀಸ್ ಪೇದೆಗೆ ತೀವ್ರ ಗಾಯಗಳಾಗಿವೆ. ಮೃತ ಲಾರಿ ಚಾಲಕನ ವಿವರ ಪತ್ತೆಯಾಗಿಲ್ಲ. ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.