ಮಡಿಕೇರಿ : ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಡಿಕೇರಿಯಲ್ಲಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನಿಂದ ಅಪರೂಪದ ನಕ್ಷತ್ರ ಆಮೆಯನ್ನು ಪಳನಿಯಪ್ಪನ್ (32) ಎಂಬಾತ ಮಡಿಕೇರಿ ನಗರದ ಅಶೋಕಪುರದಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಬಂಧಿಸಿ, ಜೀವಂತವಾಗಿದ್ದ ನಕ್ಷತ್ರ ಆಮೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಕ್ಷತ್ರ ಆಮೆಗಳನ್ನು ಲಕ್ಷಾಂತರ ರೂಪಾಯಿಗಳಿಗೆ ಮಾರಾಟ ಮಾಡುತ್ತಾರೆ ಎಂಬ ಖಚಿತ ಮಾಹಿತಿ ಮೇರೆಗೆ ಎಚ್ಚೆತ್ತುಕೊಂಡ ಮಡಿಕೇರಿಯ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ, ಆಮೆಯನ್ನು ರಕ್ಷಣೆ ಮಾಡಿದ್ದಾರೆ. ಈ ಕುರಿತು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪಳನಿಯಪ್ಪನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.