ಅಪರೂಪದ ಫೋಟೋಗಳನ್ನ ಶೇರ್ ಮಾಡಿದ ಕನಸಿನ ರಾಣಿ ಮಾಲಾಶ್ರೀ

Public TV
1 Min Read
malashree

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಕನಸಿನ ರಾಣಿ ಎಂದೇ ಖ್ಯಾತರಾದ ನಟಿ ಮಾಲಾಶ್ರೀ ಅಪಾರ ಕನ್ನಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಗಾಗ ತಮ್ಮ ಕುಟುಂಬದವರ ಜೊತೆಗಿನ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ನಟಿ ಮಾಲಾಶ್ರೀ ತಮ್ಮ ಸೀಮಂತ ಕಾರ್ಯಕ್ರಮದ ಫೋಟೋವನ್ನು ಹಂಚಿಕೊಂಡಿದ್ದಾರೆ.

ನಟಿ ಮಾಲಾಶ್ರೀ ತಮ್ಮ ಮೊದಲ ಮಗುವಿನ ಸೀಮಂತದ ಸಂದರ್ಭದ ಸುಂದರ ಕ್ಷಣಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಮಾಲಾಶ್ರೀ ಅವರ ಮಗಳು ಅನನ್ಯಾ 2001ರಲ್ಲಿ ಜನಿಸಿದ್ದರು. ಅದಕ್ಕೂ ಮುನ್ನ ಸೀಮಂತ ಶಾಸ್ತ್ರ ನಡೆದಿತ್ತು. ಅಂದು ತಮ್ಮ ಪತಿ ರಾಮು ಅವರ ಜೊತೆ ಕ್ಲಿಕ್ಕಿಸಿಕೊಂಡ ಅಪರೂಪದ ಫೋಟೋಗಳನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿಕೊಂಡಿದ್ದಾರೆ.

ಸೀಮಂತ ಫೋಟೋಗಳನ್ನ ಶೇರ್ ಮಾಡಿದ ತಕ್ಷಣ ಅಭಿಮಾನಿಗಳು ಫೋಟೋಗಳು ತುಂಬಾ ಚೆನ್ನಾಗಿವೆ ಎಂದು ಕಮೆಂಟ್ ಮಾಡುತ್ತಿದ್ದಾರೆ. 1979ರಲ್ಲಿ ಬಾಲನಟಿಯಾಗಿ ತಮಿಳು ಚಿತ್ರದ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದರು. ನಂತರ ತಮಿಳು ಮತ್ತು ತೆಲುಗಿನಲ್ಲಿ ಸುಮಾರು 34 ಚಿತ್ರಗಳಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದಾರೆ. ಅದರಲ್ಲಿ 26 ಚಿತ್ರಗಳಲ್ಲಿ ಹುಡುಗನ ಪಾತ್ರಗಳಲ್ಲಿಯೇ ನಟಿಸಿದ್ದರು ಎನ್ನುವುದು ವಿಶೇಷವಾಗಿದೆ.

dc Cover 45s9vlhc5qgao507gt8te78lg1 20160517234209

ನಟಿ ಮಾಲಾಶ್ರೀ ‘ನಂಜುಂಡಿ ಕಲ್ಯಾಣ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು.  ಕಡೆಯದಾಗಿ ‘ಉಪ್ಪು ಹುಳಿ ಖಾರ’ ಸಿನಿಮಾದಲ್ಲಿ ತೆರೆಯ ಮೇಲೆ ಕಾಣಿಸಿಕೊಂಡಿದ್ದರು. 2015ರಲ್ಲಿ ಬಿಡುಗಡೆಯಾಗಿದ್ದ ‘ಗಂಗಾ’ ಸಿನಿಮಾದ ಅಭಿನಯಕ್ಕಾಗಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿತ್ತು.

https://www.instagram.com/p/CDfq8BNAdT5/?igshid=ki62edhuuqo6

Share This Article
Leave a Comment

Leave a Reply

Your email address will not be published. Required fields are marked *