ಬೆಂಗಳೂರು: ವಿಶ್ವ ಅಪ್ಪಂದಿರ ದಿನಾಚರಣೆಯ ಅಂಗವಾಗಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ವಿಶೇಷವಾಗಿ ಹಾಡಿನ ಮೂಲವಾಗಿ ತಮ್ಮ ತಂದೆಯನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪನ ಡಾನ್ಸ್ ನೋಡೊದ್ರಲ್ಲಿ ಬ್ಯುಸಿಯಾದ ಜ್ಯೂನಿಯರ್ ಚಿರು
ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ, ಚಂದ್ರ ಮೇಲೆ ಬಂದ ಹಾಡು ಹೇಳಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಪ್ಪಂದಿರ ದಿನಕ್ಕೆ ಪುನೀತ್ ರಾಜ್‍ಕುಮಾರ್ ಅವರು ಶುಭಕೋರಿದ್ದಾರೆ. ಈ ಹಾಡು ಪುನೀತ್ ರಾಜ್‍ಕುಮಾರ್ ಬಾಲನಟನಾಗಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ಭಾಗ್ಯವಂತ ಸಿನಿಮಾದ್ದಾಗಿದೆ. ಈ ಸಿನಿಮಾದಲ್ಲಿ ಡಾ. ರಾಜ್‍ಕುಮಾರ್ ಅವರು ಅತಿಥಿ ಪಾತ್ರ ಮಾಡಿದ್ದರು.
Happy Father’s Day.#HappyFathersDay pic.twitter.com/zb1JC0SDMR
— Puneeth Rajkumar (@PuneethRajkumar) June 20, 2021
ಭಾರತೀಯ ಚಿತ್ರರಂಗದ ಮೇರು ನಟ ಡಾ. ರಾಜ್‍ಕುಮಾರ್ ಅವರನ್ನು ಮಗ ಹಾಡಿನ ಮೂಲಕವಾಗಿ ಅಪ್ಪಂದಿರ ದಿನಾಚರಣೆ ಶುಭವನ್ನು ಕೋರಿದ್ದಾರೆ. ಚಿಕ್ಕ ವಯಸ್ಸಿನಿಂದಲೇ ಸಿನಿಮಾಗಳಲ್ಲಿ ನಟಿಸುತ್ತಿದ್ದ ಪುನೀತ್‍ಗೆ ತಂದೆಯೇ ಮೊದಲ ಗುರು. ಆಗ ಪುನೀತ್ ಹೆಸರು ಮಾಸ್ಟರ್ ಲೋಹಿತ್ ಎಂದಾಗಿತ್ತು. ಹಲವಾರು ಸಿನಿಮಾಗಳಲ್ಲಿ ಅವರು ಅಪ್ಪಾಜಿ ಜೊತೆ ನಟಿಸುವ ಅವಕಾಶ ಪಡೆದುಕೊಂಡಿದ್ದರು. ಆ ಮೂಲಕ ಚಿಕ್ಕವಯಸ್ಸಿನಲ್ಲಿಯೇ ಅವರಿಗೆ ಸಿನಿಮಾ ಬಗ್ಗೆ ಅಪಾರ ಅನುಭವ ದಕ್ಕಿತ್ತು.ಫಾದರ್ಸ್ ಡೇಗೆ ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಪೋಸ್ಟ್‌ಗಳನ್ನು ಹಾಕುತ್ತಾ ಸಂಭ್ರಮಿಸುವವರ ಮಧ್ಯೆ ಅಪ್ಪನಿಗೆ ಪುನೀತ್ ಅವರು ವಿಶೇಷವಾಗಿ ಧನ್ಯವಾದ ತಿಳಿಸುತ್ತಿದ್ದಾರೆ.