ಮಂಗಳೂರು: ಅಪ್ರಾಪ್ತೆಯನ್ನು ಅಪಹರಿಸಿ ಮದುವೆಯಾದ ಆರೋಪಿಗೆ ಕೊರೊನಾ ಸೋಂಕು ತಗುಲಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಯುವಕನೊಬ್ಬ ಬಾಲಕಿಯನ್ನು ಕಿಡ್ನಾಪ್ ಮಾಡಿ ವಿವಾಹ ಆಗಿದ್ದನು. ಬಾಲಕಿಯ ಮನೆಯವರು ಯುವಕನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಯುವಕನನ್ನು ಬಂಧಿಸಿದ್ದು, ಬಂಧಿತನಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು ಕೊರೊನಾ ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿದೆ.
ಆರೋಪಿಗೆ ಸೋಂಕು ತಗುಲಿರೋದು ಖಚಿತವಾಗುತ್ತಿದ್ದಂತೆ ಆತನನ್ನು ಬಂಧಿಸಿದ ಐವರು ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.