ದಾವಣಗೆರೆ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂಪಾಯಿಗಳು ದಂಡ ವಿಧಿಸಿದೆ. 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ಕಾನೂನು (ಪೋಕ್ಸೋ) ಅಡಿಯಲ್ಲಿ ನ್ಯಾಯಾಲಯ ತೀರ್ಪು ನೀಡಿದೆ.
- Advertisement 2
ದಾವಣಗೆರೆಯ ಇಮಾಂ ನಗರದ ನಿವಾಸಿ ಸಾಧಿಕ್ (33) ಶಿಕ್ಷೆಗೆ ಗುರಿಯಾದವ. 2019 ರ ಮೇ 19 ರಂದು ಮಧ್ಯಾಹ್ನ 3ರ ವೇಳೆ ಅದೇ ಭಾಗದ ಝಂಡೇ ಕಟ್ಟೆ ಬಳಿ ಆಟವಾಡುತ್ತಿದ್ದ 8 ವರ್ಷದ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಾಧಿಕ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
- Advertisement 3
- Advertisement 4
ಮಹಿಳಾ ಠಾಣೆಯ ವೃತ್ತ ನಿರೀಕ್ಷಕಿ ಪ್ರಭಾವತಿ ಶೇತಾಸನದಿ ಹಾಗೂ ಸಿಬ್ಬಂದಿ ಸಾಧಿಕ್ ಪ್ರಕರಣದ ವಿಚಾರಣೆ ನಡೆಸಿದ್ದರು. ಆತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (ಪೋಕ್ಸೋ) ಆರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಂತರ ಸಾಧಿಕ್ ಅಪರಾಧಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಶೇಷ (ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶ ಎಸ್. ನಾಗಶ್ರೀ ಅವರು ಸಾಧಿಕ್ ಗೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದರು.
ಸರ್ಕಾರದ ಪರ ವಿಶೇಷ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಎಸ್.ಎಚ್.ಎಸ್. ಶೌಕತ್ ಅಲಿ ವಾದ ಮಂಡಿಸಿದ್ದರು.