ರಾಯಚೂರು: ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣಾ (Sindhanur City Police Station) ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಅಕ್ಕ ತಂಗಿಯರ ಮೇಲೆ ಕಿರಾತಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.
ಎರಡು ಮತ್ತು 3ನೇ ತರಗತಿ ಓದುತ್ತಿದ್ದ 8 ಹಾಗೂ 9 ವರ್ಷದ ಬಾಲಕಿಯರ ಮೇಲೆ ದೌರ್ಜನ್ಯ ಎಸಗಲಾಗಿದೆ. ಬಾಲಕಿಯರ ಕುಟುಂಬಕ್ಕೆ ಪರಿಚಯಸ್ಥ ವ್ಯಕ್ತಿಯಿಂದಲೇ ಅತ್ಯಾಚಾರ ನಡೆದಿದೆ. ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ 30 ವರ್ಷದ ಬಾಬಾನನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಪರಿಷತ್ ಚುನಾವಣೆ; ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ಇಂದು ಸಿಎಲ್‌ಪಿ ಸಭೆ

ಬಾಲಕಿಯರ ಪೋಷಕರು ಕೂಲಿ ಕೆಲಸಕ್ಕೆ ಹೋದಾಗ ಅವರ ಶೆಡ್‌ಗೆ ಬಂದು ಕೃತ್ಯ ಎಸಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡು ಶೆಡ್‌ನಲ್ಲಿ ಜೀವನ ನಡೆಸುತ್ತಿರುವ ಬಡ ಕುಟುಂಬಕ್ಕೆ ಘಟನೆಯಿಂದ ಆಘಾತವಾಗಿದೆ.
ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ, ಅತ್ಯಾಚಾರ, ಜಾತಿನಿಂದನೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮುಂಗಾರು ಕೊರತೆ ಎಫೆಕ್ಟ್: ಹಾರಂಗಿ ಜಲಾಶಯ ಒಳಹರಿವು ತೀವ್ರ ಕುಸಿತ
