ಅಬ್ಬಾ ಬಿಸಿಲು- ಸ್ವಿಮ್ಮಿಂಗ್ ಪೂಲ್‍ನಲ್ಲಿ ಐರಾ, ಯಥರ್ವ್

Public TV
2 Min Read
ayra yatharv yash

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿರುವ ಸ್ಯಾಂಡಲ್‍ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್, ತಮ್ಮ ಮಕ್ಕಳ ಫೋಟೋ, ವೀಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಅದೇ ರೀತಿ ಇದೀಗ ಬೇಸಿಗೆಯ ಸಂದರ್ಭದಲ್ಲಿ ಐರಾ ಹಾಗೂ ಯಥರ್ವ್ ಸ್ವಿಮ್ಮಿಂಗ್ ಪೂಲ್ ಬಳಿ ಪೋಸ್ ನೀಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಐರಾ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಸ್ಟೈಲಾಗಿ ನಿಂತಿರುವ ಫೋಟೋ ಹಾಗೂ ಯಥರ್ವ್ ಬರಿ ಮೈಯ್ಯಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟೆಯ ಮೇಲೆ ಕುಳಿತಿರುವ ಫೋಟೋಗಳನ್ನು ತಮ್ಮ ಇನ್‍ಸ್ಟಾ ಸ್ಟೋರಿಯಲ್ಲಿ ಹಾಕಿದ್ದಾರೆ. ಬೇಸಿಗೆ ಆರಂಭವಾಗಿದ್ದು, ವಾತಾವರಣ ಸಖತ್ ಹಾಟ್ ಆಗಿದೆ. ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿಗೆ ಬೇಸತ್ತಿರುವ ಜನ, ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಅದೇ ರೀತಿ ಐರಾ ಹಾಗೂ ಯಥರ್ವ್ ಸಹ ಸ್ವಿಮ್ಮಿಂಗ್ ಪೂಲ್‍ನಲ್ಲಿ ಕಾಲ ಕಳೆದಿದ್ದಾರೆ.

iamradhikapandit 164513531 740069143371019 468249450360217790 n

ರಾಧಿಕಾ ಪಂಡಿತ್ ತಮ್ಮ ಇನ್‍ಸ್ಟಾಗ್ರಾಮ್ ಮೂಲಕ ಅಪ್‍ಡೇಟ್ಸ್ ಗಳನ್ನು ನೀಡುತ್ತಲೇ ಇದ್ದು, ಮಕ್ಕಳ ಫೋಟೋಗಳನ್ನು ಹೆಚ್ಚು ಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಸಹ ನೆಚ್ಚಿನ ನಟ, ನಟಿಯ ಮಕ್ಕಳ ಫೋಟೋ ನೋಡಿ ಸಖತ್ ಖುಷಿ ಪಡುತ್ತಿದ್ದಾರೆ, ಲೈಕ್ ಮಾಡುತ್ತಿದ್ದಾರೆ.

iamradhikapandit 164406436 116991820414772 4822813088469625867 n

ವಿವಾಹದ ಬಳಿಕ ನಟನೆಯಿಂದ ಸ್ವಲ್ಪ ದೂರವೇ ಉಳಿದಿರುವ ರಾಧಿಕಾ ಪಂಡಿತ್, ಮಕ್ಕಳ ಪಾಲನೆ, ಪೋಷಣೆಯಲ್ಲಿ ಬ್ಯುಸಿಯಾಗಿದ್ದಾರೆ. ಪೂರ್ತಿ ಸಮಯವನ್ನು ಕುಟುಂಬಕ್ಕಾಗಿ ಮೀಸಲಿರಿಸಿದ್ದಾರೆ. ಇನ್ನೊಂದೆಡೆ ಅವರ ಅಭಿಮಾನಿಗಳು ರಾಧಿಕಾ ಪಂಡಿತ್ ಅವರನ್ನು ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಯಶ್ ಸಹ ತಮ್ಮ ಬ್ಯುಸಿ ಶೆಡ್ಯೂಲ್ ಮಧ್ಯೆ ಕುಟುಂಬಕ್ಕೆ ಸಮಯ ನೀಡುತ್ತಿದ್ದಾರೆ. ಮಕ್ಕಳು ಹಾಗೂ ಕುಟುಂಬದೊಂದಿಗೆ ಕಾಲ ಕಳೆಯುತ್ತಾರೆ.

ಇದೀಗ ಕೆಜಿಎಫ್-2 ಕೆಲಸಗಳಲ್ಲಿ ಯಶ್ ತಮ್ಮನ್ನು ತೊಡಗಿಸಿಕೊಂಡಿದ್ದು, ಸಿನಿಮಾ ಜುಲೈ 16ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಈಗಾಗಲೇ ತಿಳಿಸಿದೆ. ಕೆಜಿಎಫ್-2 ರಿಲೀಸ್‍ಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, ನೆಚ್ಚಿನ ನಟನ ಸಿನಿಮಾ ಯಾವಾಗ ಬಿಡುಗಡೆಯಾಗುತ್ತೋ ಎಂದು ಎದುರು ನೋಡುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *