ಅಮಾನತು ಸಂಸದರ ಮನವೊಲಿಕೆ ವಿಫಲ – ಉಪವಾಸ ನಿರಶನಕ್ಕೆ ಕೂತ ಉಪಸಭಾಪತಿ

Public TV
1 Min Read
HARIVAMSH

ನವದೆಹಲಿ: ಸೋಮವಾರ ಅಮಾನತುಗೊಂಡ ರಾಜ್ಯಸಭೆಯ ಎಂಟು ಮಂದಿ ಸಂಸದರ ಮನವೊಲಿಕೆ ವಿಫಲವಾದ ಬಳಿಕ ಉಪಸಭಾಪತಿ ಹರಿವಂಶ್ ಉಪವಾಸ ನಿರಶನಕ್ಕೆ ಕೂತಿದ್ದಾರೆ.

Rajya Sabha

ಉಪವಾಸ ನಿರಶನಕ್ಕೂ ಮುನ್ನ ಇಂದು ಬೆಳಗ್ಗೆ, ಸಂಸತ್ ನ ಗಾಂಧಿ ಪ್ರತಿಮೆ ಬಳಿ ಅಮಾನತು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಎಂಟು ಮಂದಿ ಸಂಸದರು ಭೇಟಿ ಮಾಡಿ ಚಹಾ ನೀಡಿ ಮನವೊಲಿಸಲು ಪ್ರಯತ್ನಿಸಿದರು. ಆದರೆ ಸಂಸದರ ಆಕ್ರೋಶ ತಣಿಯದ ಹಿನ್ನಲೆ ಪ್ರತಿಭಟನೆ ಹಿಂಪಡೆಯಲು ನಿರಾಕರಿಸಿದರು.

ಇದಾದ ಬೆನ್ನಲ್ಲೇ ರಾಜ್ಯಸಭೆ ಸಭಾಪತಿ ವೆಂಕಯ್ಯನಾಯ್ಡು ಅವರಿಗೆ ಪತ್ರ ಬರೆದ ಹರಿವಂಶ್, ತಾವು ನಾಳೆ ಬೆಳಗ್ಗೆವರೆಗೂ ಇಡೀ ದಿನ ಉಪವಾಸ ಕೂರುವುದಾಗಿ ಘೋಷಿಸಿದರು. ಮೊನ್ನೆ ಸದನದಲ್ಲಿ ಆದ ಘಟನೆ ಬಗ್ಗೆ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿರುವ ಹರಿವಂಶ್, ವಿಪಕ್ಷಗಳ ಸದಸ್ಯರ ವರ್ತನೆಯಿಂದ ಬಹಳ ನೋವಾಗಿದ್ದು, ತನಗೆ ಇಡೀ ರಾತ್ರಿ ನಿದ್ರೆ ಬರಲಿಲ್ಲ. ನಾಳೆ ಬೆಳಗ್ಗೆಯವರೆಗೂ ಉಪವಾಸ ಕೂರುವುದಾಗಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಅನುಮೋದನೆ ಪಡೆದಿದ್ದ ಎರಡು ಕೃಷಿ ಮಸೂದೆಗಳನ್ನ ಭಾನುವಾರ ರಾಜ್ಯಸಭೆಯಲ್ಲಿ ಮಂಡನೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವಿಪಕ್ಷಗಳ ಸದಸ್ಯರು ಮಸೂದೆ ವಿರುದ್ಧ ಪ್ರತಿಭಟನೆ ನಡೆಸಿದರು. ಕೆಲ ಸದಸ್ಯರು ಸದನದ ಬಾವಿಗಿಳಿದು ದುರ್ವರ್ತನೆ ತೋರಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಅನುಚಿತ ವರ್ತನೆ ಆರೋಪ- ನಾಸೀರ್ ಹುಸೇನ್ ಸೇರಿ 8 ಸಂಸದರು ಅಮಾನತು

ಈ ಹಿನ್ನೆಲೆಯಲ್ಲಿ ನಿನ್ನೆ ಸಭಾಪತಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಈ ಘಟನೆಯನ್ನು ಸದನದಲ್ಲಿ ಪ್ರಸ್ತಾಪಿಸಿ ಸದಸ್ಯರ ದುರ್ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದ ನಾಸಿರ್ ಹುಸೇನ್ ಸೇರಿದಂತೆ ಎಂಟು ಸಂಸದರನ್ನು ಒಂದು ವಾರದ ಕಾಲ ಅಮಾನತು ಮಾಡಿರುವುದಾಗಿ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *