ನವದೆಹಲಿ: ಕೇಂದ್ರಗೃಹ ಮಂತ್ರಿ ಅಮಿತ್ ಶಾ ಅವರಿಗೆ ಕೊರೊನಾ ನೆಗೆಟಿವ್ ಬಂದಿದ್ದು, ಅವರು ಇನ್ನಷ್ಟು ದಿನ ಮನೆಯಲ್ಲೇ ಉಳಿಯಲಿದ್ದಾರೆ.
ಕಳೆದ ಅಗಸ್ಟ್ 2ರಂದು ಅಮಿತ್ ಶಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ತಮಗೆ ಕೊರೊನಾ ಪಾಸಿಟಿವ್ ಬಂದಿರುವ ವಿಚಾರವನ್ನು ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು. ಈಗ ಮತ್ತೆ ಟ್ವೀಟ್ ಮಾಡಿರುವ ಅವರು ನನ್ನ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ.
आज मेरी कोरोना टेस्ट रिपोर्ट नेगेटिव आई है।
मैं ईश्वर का धन्यवाद करता हूँ और इस समय जिन लोगों ने मेरे स्वास्थ्यलाभ के लिए शुभकामनाएं देकर मेरा और मेरे परिजनों को ढाढस बंधाया उन सभी का ह्रदय से आभार व्यक्त करता हूँ।
डॉक्टर्स की सलाह पर अभी कुछ और दिनों तक होम आइसोलेशन में रहूँगा।
— Amit Shah (@AmitShah) August 14, 2020
ಇಂದು ಮಾಡಿಸಿದ ನನ್ನ ಕೊರೊನಾ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ. ನಾನು ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸಮಯದಲ್ಲಿ ನನ್ನ ಶುಭ ಹಾರೈಸಿದ ಎಲ್ಲರಿಗೂ ಕೃತಜ್ಞತೆಗಳು. ವೈದ್ಯರ ಸಲಹೆ ಹಿನ್ನೆಲೆ ಇನ್ನಷ್ಟು ದಿನ ಮನೆಯಲ್ಲಿ ಇರಲಿದ್ದೇನೆ ಎಂದು ಅಮಿತ್ ಶಾ ಅವರು ಟ್ವೀಟ್ ಮಾಡಿದ್ದಾರೆ.
ತಮಗೆ ಕೊರೊನಾ ಪಾಸಿಟಿವ್ ಬಂದಿರುವ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ಟ್ವೀಟ್ ಮಾಡಿ ತಿಳಿಸಿದ್ದರು. ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಟೆಸ್ಟ್ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ತಮ್ಮ ಸಂಪರ್ಕ ಬಂದವರು ಐಸೂಲೇಷನ್ ಆಗುವಂತೆ ಅಮಿತ್ ಶಾ ಮನವಿ ಮಾಡಿದ್ದರು.