ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹದ ಹಿನ್ನಲೆಯಲ್ಲಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರನ್ನು ಬಂಧಿಸಲಾಗಿದೆ.
Advertisement
ಭಾನುವಾರ ರಾತ್ರಿ ಕೆ.ಆರ್.ಪುರಂನಲ್ಲಿರುವ ನಿವಾಸದಿಂದಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಟ್ವಿಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆನಂದ್ ಪ್ರಸಾದ್ ಬರೆದಿದ್ದರು. ಸದ್ಯ ಟ್ವಿಟರ್ ಬರಹ ಡಿಲೀಟ್ ಮಾಡಲಾಗಿದೆ.
Advertisement
Advertisement
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 505 (1)(ಬಿ)(ನಕಲಿ ಸಂದೇಶ ರವಾನೆ), 505(1) (ಅ), 153(ಕೋಮು ಸಂಘರ್ಷಕ್ಕೆ ಪ್ರೇರೇಪಣೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
Advertisement