ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಅವರ ಕೆಲ ಮನೆ ಕೆಲಸದವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ನಟ ಹೋಂ ಕ್ವಾರಂಟೈನ್ ಆಗಿದ್ದಾರೆ.
ನಟಿ ಅಮೀರ್ ಖಾನ್ ಈ ಬಗ್ಗೆ ಟ್ವಿಟ್ ಮಾಡಿದ್ದು, ನಮ್ಮ ಕುಟುಂಬದರಿಗೆ ಯಾರಿಗೂ ಕೊರೊನಾ ಬಂದಿಲ್ಲ ಎಂದು ತಿಳಿಸಿದ್ದಾರೆ. ಇಂದು ಅಮೀರ್ ಖಾನ್ ತಮ್ಮ ತಾಯಿಯನ್ನು ಕೊರೊನಾ ಪರೀಕ್ಷೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಹೀಗಾಗಿ ತಮ್ಮ ತಾಯಿಗೆ ಕೊರೊನಾ ನೆಗೆಟಿವ್ ಬರಲಿ ಎಂದು ಪ್ರಾರ್ಥಿಸಿ ಅಂತ ಮನವಿ ಮಾಡಿಕೊಂಡಿದ್ದಾರೆ.
Advertisement
Advertisement
ಟ್ವಿಟ್ಟರ್ ಪೋಸ್ಟ್ನಲ್ಲಿ ಏನಿದೆ?
“ನಮ್ಮ ಮನೆಯ ಕೆಲವು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ತಕ್ಷಣ ನಾವು ಹೋಮ್ ಕ್ವಾರಂಟೈನ್ ಆಗಿದ್ದೇವೆ. ಬಿಎಂಸಿ (ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್) ಅಧಿಕಾರಿಗಳು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ತ್ವರಿತವಾಗಿ ಕರೆದುಕೊಂಡು ಹೋದರು. ಆದ್ದರಿಂದ ಶೀಘ್ರವೇ ಕಾಳಜಿ ವಹಿಸಿದ್ದಕ್ಕಾಗಿ ಮತ್ತು ಕಟ್ಟಡವನ್ನು ಸೋಂಕು ನಿವಾರಕ ದ್ರಾವಣದಿಂದ ಸ್ವಚ್ಛಗೊಳಿಸಿದ್ದಕ್ಕಾಗಿ ಬಿಎಂಸಿಗೆ ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
Advertisement
Advertisement
“ನಮ್ಮ ಕುಟುಂಬವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಎಲ್ಲರದ್ದು ನೆಗೆಟಿವ್ ಬಂದಿದೆ. ಇದೀಗ ನಾನು ನನ್ನ ತಾಯಿಯನ್ನು ಕೊರೊನಾ ಪರೀಕ್ಷೆಗಾಗಿ ಕರೆದುಕೊಂಡು ಹೋಗುತ್ತಿದ್ದೇನೆ. ಅವರಿಗೆ ಕೊರೊನಾ ನೆಗೆಟಿವ್ ಬರಲಿ ಎಂದು ದಯವಿಟ್ಟು ಪ್ರಾರ್ಥಿಸಿ” ಎಂದು ಮನವಿ ಮಾಡಿಕೊಂಡಿದ್ದಾರೆ.
ಅಷ್ಟೇ ಅಲ್ಲದೇ ಆಸ್ಪತ್ರೆ, ಅಲ್ಲಿನ ವೈದ್ಯರು, ನರ್ಸ್ ಮತ್ತು ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ತಕ್ಷಣವೇ ಸಹಾಯ ಮಾಡಿದ ಬಿಎಂಸಿಗೆ ಮತ್ತೊಮ್ಮೆ ಧನ್ಯವಾದ ತಿಳಿಸಿದ್ದಾರೆ.
https://twitter.com/aamir_khan/status/1277850257653555205