ಬೆಂಗಳೂರು: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವನ ಸವಿ ನೆನಪಿಗಾಗಿ ಕರ್ನಾಟಕ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
1. ಅಮೃತ ಗ್ರಾಮ ಪಂಚಾಯತಿಗಳು:
ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ಬೀದಿ ದೀಪಗಳು, ಪ್ರತಿ ಮನೆಗೆ ಕುಡಿಯುವ ನೀರಿನ ಸರಬರಾಜು, ಶೇ.100 ರಷ್ಟು ಘನತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು, ಸೌರವಿದ್ಯುತ್ ಅಳವಡಿಕೆ, ಡಿಜಿಟಲ್ ಲೈಬ್ರರಿಗಳೊಂದಿಗೆ ಸುಸಜ್ಜಿತವಾದ ಶಾಲೆಗಳನ್ನು ಸ್ಥಾಪಿಸಿ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಯೋಜನೆ ಅನುಷ್ಠಾನಗೊಳಿಸಲಾಗುವುದು.
Advertisement
75ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ರವರ ಭಾಷಣದ ಪ್ರಮುಖಾಂಶಗಳು;#IndependenceDayIndia #IndiaAt75 #AzadiKaAmritMahotsav pic.twitter.com/DXhKeURS5T
— CM of Karnataka (@CMofKarnataka) August 15, 2021
Advertisement
2. ಅಮೃತ ಗ್ರಾಮೀಣ ವಸತಿ ಯೋಜನೆ:
ಆಯ್ದ 750 ಗ್ರಾಮ ಪಂಚಾಯಿತಿಗಳಲ್ಲಿ ವಸತಿ ರಹಿತ ಮತ್ತು ಆಶ್ರಯರಹಿತರನ್ನು ಗುರುತಿಸಿ ಸರ್ವರಿಗೂ ವಸತಿ ಕಲ್ಪಿಸುವ ಯೋಜನೆ ಅನುಷ್ಠಾನಗೊಳಿಸಲಾಗುವುದು.
Advertisement
Advertisement
3. ಅಮೃತ ರೈತ ಉತ್ಪಾದಕ ಸಂಸ್ಥೆಗಳು:
ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಿ ಪ್ರತಿ ಸಂಸ್ಥೆಗೆ 30 ಲಕ್ಷ ರೂ. ನಂತೆ ಮೂರು ವರ್ಷದ ಅವಧಿಗೆ 225 ಕೋಟಿ ರೂ. ಅನುದಾನ ನೀಡಲಾಗುವುದು.
4. ಅಮೃತ ನಿರ್ಮಲ ನಗರ:
ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಅಮೃತ ನಿರ್ಮಲ ನಗರ ಯೋಜನೆ ರೂಪಿಸಿ ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂ.ನಂತೆ 75 ಕೋಟಿ ರೂ.ಗಳನ್ನು ಒದಗಿಸಲಾಗುವುದು.
75ನೇ ಸ್ವಾತಂತ್ರ್ಯ ದಿನಾಚರಣೆಯಂದು ಮುಖ್ಯಮಂತ್ರಿ ಶ್ರೀ @BSBommai ರವರು ತಮ್ಮ ಭಾಷಣದಲ್ಲಿ ಘೋಷಿಸಿದ ಕೆಲವು ವಿಶೇಷ ಕಾರ್ಯಕ್ರಮಗಳು; (1/3)#ಸ್ವಾತಂತ್ರ್ಯದಿನ #IndependenceDayIndia2021 #AzadiKaAmritMahotsav #IndiaAt75 #AmritMahotsav pic.twitter.com/3zr4owoVl0
— CM of Karnataka (@CMofKarnataka) August 15, 2021
5. ಅಮೃತ ಶಾಲಾ ಸೌಲಭ್ಯ ಯೋಜನೆ:
ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯ ಒದಗಿಸಲು ತಲಾ 10 ಲಕ್ಷ ರೂ. ಗಳಂತೆ 75 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು. ಇದನ್ನೂ ಓದಿ: ಮೇಕೆದಾಟು, ಮಹದಾಯಿ ಯೋಜನೆ ಪ್ರಾರಂಭಿಸುತ್ತೇವೆ: ಸಿಎಂ ಬೊಮ್ಮಾಯಿ
6. ಅಮೃತ ಅಂಗನವಾಡಿ ಕೇಂದ್ರಗಳು:
ಆಯ್ದ 750 ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಮೇಲ್ದರ್ಜೆಗೇರಿಸಲು ಪ್ರತಿ ಅಂಗನವಾಡಿಗೆ 1 ಲಕ್ಷ ರೂ.ನಂತೆ 7.5 ಕೋಟಿ ರೂ. ಗಳನ್ನು ಹಣ ವಿನಿಯೋಗಿಸಲಾಗುವುದು.
7. ಅಮೃತ ಸ್ವಸಹಾಯ ಕಿರು ಉದ್ದಿಮೆಗಳು:
ಆಯ್ದ 7,500 ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸಲು ತಲಾ 1 ಲಕ್ಷ ರೂ. ನಂತೆ 75 ಕೋಟಿ ರೂ. ಬೀಜ ಧನವನ್ನು ಒದಗಿಸಲಾಗುವುದು.
75ನೇ ಸ್ವಾತಂತ್ರ್ಯ ದಿನಾಚರಣೆಯಂದು ಮುಖ್ಯಮಂತ್ರಿ ಶ್ರೀ @BSBommai ರವರು ತಮ್ಮ ಭಾಷಣದಲ್ಲಿ ಘೋಷಿಸಿದ ಕೆಲವು ವಿಶೇಷ ಕಾರ್ಯಕ್ರಮಗಳು; (2/3)#ಸ್ವಾತಂತ್ರ್ಯದಿನ #IndependenceDayIndia2021 #AzadiKaAmritMahotsav #IndiaAt75 #AmritMahotsav pic.twitter.com/qGnmX8DIfx
— CM of Karnataka (@CMofKarnataka) August 15, 2021
8. ಅಮೃತ ಸಮುದಾಯ ಅಭಿವೃದ್ಧಿ ಯೋಜನೆ:
ಆಯ್ದ 750 ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಗುರುತಿಸಿ ರಚನಾತ್ಮಕ ಸಾಮುದಾಯಿಕ ಸೇವೆಗಳಲ್ಲಿ ತೊಡಗಿಕೊಳ್ಳುವಂತೆ ಪ್ರೇರೇಪಿಸಲಾಗುವುದು.
9. ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆ:
ಆಯ್ದ 750 ಪ್ರಾಥಮಿಕ ಕೇಂದ್ರಗಳ ಮೂಲಸೌಕರ್ಯಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ. ವೆಚ್ಚದಲ್ಲಿ ಮಾಡಲಾಗುವುದು.
10. ಅಮೃತ ಕೌಶಲ್ಯ ತರಬೇತಿ ಯೋಜನೆ:
ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಅಮುದಾಯಗಳ 75 ಸಾವಿರ ಯುವಕ ಯುವತಿಯರ ಕೌಶಲ್ಯಾಭಿವೃದ್ಧಿಗೆ 2 ವರ್ಷಗಳ ತರಬೇತಿ ಯೋಜನೆಯನ್ನು 112 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
11. ಅಮೃತ ಕ್ರೀಡಾ ದತ್ತು ಯೋಜನೆ:
ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಭಾರತದ ಮತ್ತು ಕರ್ನಾಟಕದ ಕ್ರೀಡಾಪಟುಗಳ ಸಾಧನೆ ಗಮನಾರ್ಹವಾದುದು. ಮುಂದಿನ ಪ್ಯಾರೀಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಪದಕ ವಿಜೇತ ಸಾಮಥ್ರ್ಯವುಳ್ಳ ಆಯ್ದ 75 ಕ್ರೀಡಾಪಟುಗಳನ್ನು ರೂಪಿಸಲು ಅಗತ್ಯವಾದ ತರಬೇತಿ ಮತ್ತು ಪ್ರೋತ್ಸಾಹ ನೀಡಲು ಅಮೃತ ಕ್ರೀಡಾ ದತ್ತು ಯೋಜನೆ ಅನುಷ್ಠಾನಗೊಳಿಸಲಾಗುವುದು.