ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ನಡೆಯನ್ನು ಅನುಸರಿದ್ದು ಚೀನಾದ ಟಿಕ್‌ಟಾಕ್ ಅಪ್ಲಿಕೇಶನ್ ಅನ್ನು ನಿಷೇಧಿಸುತ್ತೇನೆ ಎಂದು ಹೇಳಿದ್ದಾರೆ. ಟ್ರಂಪ್ ಯಾವಾಗ ನಿಷೇಧ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂಬುದರ ಬಗ್ಗೆ ಯಾವುದೇ ವಿಚಾರವನ್ನು ತಿಳಿಸಿಲ್ಲ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಅವರು ಜುಲೈ ಮೊದಲ ವಾರದಲ್ಲಿ, ಟಿಕ್‌ಟಾಕ್ ಸೇರಿದಂತೆ ಚೀನಾದ ಹಲವು ಮೊಬೈಲ್ ಅಪ್ಲಿಕೇಷನ್‌ಗಳನ್ನು ನಿಷೇಧಿಸಲು ಚಿಂತನೆ ನಡೆದಿದೆ ಎಂದು ಹೇಳಿದ್ದರು.
Advertisement
Advertisement
ಚೀನಾದ ಕಮ್ಯುನಿಸ್ಟ್ ಪಕ್ಷದಿಂದ ನಿಯಂತ್ರಿಸಲ್ಪಡುವ ಗುಪ್ತಚರ ಸಂಸ್ಥೆಗಳಿಗೆ ಅಲ್ಲಿನ ಕಂಪನಿಗಳು ಸಹಕಾರ ನೀಡುತ್ತಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ ಎಂದು ತಿಳಿಸಿದ್ದರು.ಬೈಟ್ ಡ್ಯಾನ್ಸ್ ಕಂಪನಿಯ ಜನಪ್ರಿಯ ಕಿರು ವಿಡಿಯೋ ಅಪ್ಲಿಕೇಶನ್ ಟಿಕ್‌ಟಾಕ್ ಅನ್ನು ಅಮೆರಿಕದಲ್ಲಿ 8 ಕೋಟಿ ಜನ ಬಳಕೆ ಮಾಡುತ್ತಿದ್ದಾರೆ.
Advertisement
ಈ ನಡುವೆ ಜಪಾನ್‌ನಲ್ಲಿ ಕೂಡ ಚೀನಾದ ಟಿಕ್‌ಟಾಕ್ ನಿಷೇಧಿಸಲು ಸರ್ಕಾರ ಮುಂದಾಗಿದೆ. ಜಪಾನ್‌ನ ಆಡಳಿತ ಪಕ್ಷ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ಚೀನಾ ಮೂಲದ ಟಿಕ್‌ಟಾಕ್ ಅನ್ನು ನಿಷೇಧಿಸುವ ಕುರಿತು ಈಗಾಗಲೇ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: ಮೈಕ್ರೋಸಾಫ್ಟ್ ತೆಕ್ಕೆಗೆ ಟಿಕ್‌ಟಾಕ್ – ಖರೀದಿ ಮಾತುಕತೆ ಆರಂಭ
Advertisement
ಗಲ್ವಾನ್ ಘರ್ಷಣೆಯ ಬಳಿಕ ಭಾರತ ಟಿಕ್‌ಟಾಕ್ ಅಪ್ಲಿಕೇಶನ್ ಭದ್ರತೆ ಮತ್ತು ದೇಶ ಪ್ರಜೆಗಳ ಖಾಸಗಿತನವನ್ನು ರಕ್ಷಿಸುವ ಸಂಬಂಧ ಟಿಕ್‌ಟಾಕ್ ಸೇರಿದಂತೆ 59 ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಮೂಲಕ ಡಿಜಿಟಲ್ ಸ್ಟ್ರೈಕ್ ಮಾಡಿತ್ತು.