ಬೆಂಗಳೂರು: ಹೆಣ್ಣು ಮಕ್ಕಳ ಒಳ ಉಡುಪಿನ ಮೇಲೆ ಕನ್ನಡದ ಬಾವುಟದ ಬಣ್ಣಗಳನ್ನು ಹಾಗೂ ಕರ್ನಾಟಕದ ರಾಜ್ಯ ಲಾಂಛನವನ್ನು ಬಳಸಿರುವ ಅಮೇಜಾನ್ ಕೆನಡಾ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ,ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಕನ್ನಡದ ಭಾಷೆ, ಸಂಸ್ಕೃತಿ ಮತ್ತು ಪರಂಪರೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡ ನೆಲದ ಶ್ರೇಷ್ಠತೆಯ ಅರಿವಿಲ್ಲದ ವಿದೇಶಿ ಸಂಸ್ಥೆಗಳು ಕನ್ನಡದ ಅಸ್ಮಿತೆಗೆ ಅವಮಾನ ಮಾಡುವಂತಹ ಯಾವುದೇ ಕೆಲಸ ಮಾಡಿದರೂ ಅದನ್ನು ನಾನು ಪ್ರಬಲವಾಗಿ ಖಂಡಿಸುತ್ತೇನೆ ಎಂದರು. ಇದನ್ನೂ ಓದಿ: ಬ್ರಾ, ಪ್ಯಾಂಟಿ ಮೇಲೆ ಕರ್ನಾಟಕದ ಲಾಂಛನ, ಕನ್ನಡದ ಬಣ್ಣ- ಗೂಗಲ್ ಬಳಿಕ ಅಮೇಜಾನ್ ಅವಾಂತರ
ಕನ್ನಡ ನೆಲದ ಭಾವನೆಗೆ ಧಕ್ಕೆ ಮಾಡುವಂತಹ ಯಾವುದೇ ಕ್ರಮಕ್ಕೆ ನನ್ನ ತೀವ್ರ ವಿರೋಧವಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿ ನಾನು ಇಂತಹ ಕೃತ್ಯದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅವಶ್ಯವೆಂದು ಭಾವಿಸಿ ಅಮೇಜಾನ್ ಕೆನಡಾ ಸಂಸ್ಥೆಯ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಲು ಸೂಚಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಇದನ್ನೂ ಓದಿ: ಕನ್ನಡಿಗರಲ್ಲಿ ಕನ್ನಡದಲ್ಲೇ ಕ್ಷಮೆ ಕೇಳಿದ ಗೂಗಲ್