ಬೆಂಗಳೂರು: ನಟ ಶ್ರೀ ಮುರಳಿ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದು, ಸಿನಿಮಾ ಹಾಗೂ ವೈಯಕ್ತಿಕ ಜೀವನದ ಕುರಿತು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅಮ್ಮನಿಗೆ ಗಿಫ್ಟ್ ನೀಡಿದ ವಿಚಾರವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.
Advertisement
ಅಮ್ಮನಿಗೆ ಗಿಫ್ಟ್ ನೀಡಿರುವ ಕುರಿತು ಶ್ರೀ ಮುರುಳಿ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಸಣ್ಣ ಅಹಂ ಭಾವವಿತ್ತು. ಹೀಗಾಗಿ ಇದನ್ನು ಕ್ಲಿಯರ್ ಮಾಡುತ್ತಿದ್ದೇನೆ. ನಮ್ಮ ಅಮ್ಮ ಹೊಸ ಫೋನ್ ಕೇಳಿರಲಿಲ್ಲ. ಅವರು ದೊಡ್ಡ ಡಿಮ್ಯಾಂಡ್ ಇಟ್ಟಿದ್ದರಂತೆ. ಹೀಗಾಗಿ ಹಳೆ ಫೋನ್ ನೋಡಲು ಆಗದೆ ಅಮ್ಮನಿಗೆ ಫೋನ್ ಗಿಫ್ಟ್ ನೀಡಿದೆ. ಈಗ ಅವರ ಡಿಮ್ಯಾಂಡ್ ಕೇಳಿ ಆಶ್ಚರ್ಯವಾಯಿತು. ಸರಿ ಮಾ ಹೇಳಿದ್ದೀನಿ. ನಿಮ್ಮ ಅತ್ತೆಗೆ ಹೆಳ್ಬಿಡಮ್ಮ ಎಂದು ಅವರ ಪತ್ನಿ ವಿದ್ಯಾ ಶ್ರೀಮುರುಳಿಗೆ ಟ್ಯಾಗ್ ಮಾಡಿದ್ದಾರೆ. ಅಮ್ಮನಿಗೆ ಫೋನ್ ಕೊಡಿಸಿದ್ದಕ್ಕೆ ಅಭಿಮಾನಿಗಳು ಕಮೆಂಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement
Advertisement
ರೋರಿಂಗ್ ಸ್ಟಾರ್ ಶ್ರೀಮುರುಳಿ ಭರಾಟೆ ಸಿನಿಮಾ ಬಳಿಕ ಮದಗಜ ಚಿತ್ರದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. 2019ರ ಜನವರಿಯಲ್ಲೇ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಕುರಿತು ಅಧೀಕೃತವಾಗಿ ಘೋಷಣೆ ಮಾಡಿಲಾಗಿತ್ತು. ಬಳಿಕ ಸ್ವಲ್ಪ ದಿನಗಳ ಕಾಲ ಅಪ್‍ಡೇಟ್ ಸಿಕ್ಕಿರಲಿಲ್ಲ. ನಂತರ ಚಿತ್ರದ ನಾಯಕಿಯ ಅಯ್ಕೆಯ ಕುರಿತು ಮದಗಜ ಸದ್ದು ಮಾಡಿತ್ತು. ಆಶಿಕಾ ರಂಗನಾಥ್ ರೋರಿಂಗ್ ಸ್ಟಾರ್ ಶ್ರೀಮುರುಳಿ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ಎಂಬುದು ಇದೇ ವೇಳೆ ಬಹಿರಂಗವಾಯಿತು.
Advertisement
ಹಿರೋಯಿನ್ ಆಯ್ಕೆಯಾಗುತ್ತಿದ್ದಂತೆ ಶೂಟಿಂಗ್‍ಗೆ ಸಿದ್ಧತೆ ಮಾಡಿಕೊಂಡಿದ್ದ ಮದಗಜ ಚಿತ್ರತಂಡ ಉತ್ತರ ಭಾರತದತ್ತ ತೆರಳಿತ್ತು. ಮೊದಲ ಹಂತದ ಚಿತ್ರೀಕರಣವನ್ನು ವಾರಣಾಸಿಯಲ್ಲಿ ಮಾಡಲಾಗಿತ್ತು. ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ಮರಳುತ್ತಿದ್ದಂತೆ ಲಾಕ್‍ಡೌನ್ ಘೋಷಣೆಯಾಯಿತು. ಹೀಗಾಗಿ ಚಿತ್ರೀಕರಣ ಅಲ್ಲಿಗೆ ನಿಂತಿದೆ. ಲಾಕ್‍ಡೌನ್ ವೇಳೆ ಶ್ರೀಮುರುಳಿ ಸಹ ಕುಟುಂಬದೊಂದಿಗೆ ಕಾಲ ಕಳೆದಿದ್ದಾರೆ.
ಎರಡನೇ ಹಂತದ ಚಿತ್ರೀಕರಣವನ್ನು ಮೈಸೂರಿನಲ್ಲಿ ಮುಂದುವರಿಸಲು ನಿರ್ಧರಿಸಲಾಗಿತ್ತು. ಅರಮನೆ ನಗರಿಯಲ್ಲಿ ಇನ್ನೇನು ಚಿತ್ರಕರಣ ಆರಂಭಿಸುವಷ್ಟರಲ್ಲಿ ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿತು. ಬಳಿಕ ಇಡೀ ಸಿನಿಮಾ ರಂಗ ಸ್ತಬ್ಧವಾಗಿ ಎಲ್ಲರೂ ಮನೆಯಲ್ಲೇ ಕಾಲ ಕಳೆಯುವಂತಾಯಿತು. ಲಾಕ್‍ಡೌನ್ ಎಫೆಕ್ಟ್ ನಿಂದಾಗಿ ಮದಗಜ ಚಿತ್ರೀಕರಣ ಸಹ ಸ್ಥಗಿತಗೊಂಡಿತು. ಇದೀಗ ನಿಧಾನವಾಗಿ ಚಿತ್ರೀಕರಣ ಆರಂಭವಾಗಿದ್ದು, ಹಲವು ಸಿನಿಮಾಗಳ ಕಾರ್ಯ ಶುರುವಾಗಿದೆ. ಆದರೆ ಮದಗಜ ಚಿತ್ರದ ಶೂಟಿಂಗ್ ಆರಂಭಿಸುವ ಕುರಿತು ಯಾವುದೇ ಸುಳಿವು ಸಿಕ್ಕಿಲ್ಲ.
ವಿಶೇಷ ಎಂಬಂತೆ ಚಿತ್ರದ ಸ್ಕ್ರಿಪ್ಟ್‍ನ್ನು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಫೈನಲ್ ಮಾಡುತ್ತಿದ್ದರು. ಲಾಕ್‍ಡೌನ್ ಹಿನ್ನೆಲೆ ಕೆಜಿಎಫ್-2 ಸಿನಿಮಾ ಶೂಟಿಂಗ್ ಸಹ ಸ್ಥಗಿತಗೊಂಡಿತ್ತು. ಹೀಗಾಗಿ ಪ್ರಶಾಂತ್ ನೀಲ್ ಮದಗಜ ಸ್ಕ್ರಿಪ್ಟ್ ಫೈನಲ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಹೇಶ್ ಕುಮಾರ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರುತ್ತಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಚಿತ್ರೀಕರಣವನ್ನಾಧರಿಸಿ ಕಥೆ ಹೆಣೆಯಲಾಗಿದೆ. ಈ ಸ್ಕ್ರಿಪ್ಟ್‍ನ್ನು ಪ್ರಶಾಂತ್ ನೀಲ್ ಅವರು ಫೈನಲ್ ಮಾಡಿದ್ದಾರೆ. ಹೆಚ್ಚು ಜನರನ್ನು ತಲುಪುವ ರೀತಿಯಲ್ಲಿ ಕಟ್ಟಿಕೊಡಲಿದ್ದಾರೆ ಎಂದು ನಿರ್ಮಾಪಕ ಉಮಾಪತಿ ಮಾಹಿತಿ ನೀಡಿದ್ದರು.