ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ.
Advertisement
ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ, 1.25 ಲಕ್ಷ ಮಣ್ಣಿನ ಹಣತೆಗಳನ್ನು ಮಾಡಿಕೊಡುವಂತೆ ಆರ್ಡರ್ ಬಂದಿದೆ. ಈ ಗ್ರಾಮದಲ್ಲಿ ಸುಮಾರು 40 ಕುಟುಂಬಗಳಿವೆ. ಸದ್ಯ ನಾವು ಹಣತೆಗಳನ್ನು ಮಾಡುವ ಬ್ಯುಸಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!
Advertisement
Ayodhya: Earthen lamps being made, ahead of the foundation stone laying ceremony of the Ram Temple on August 5.
An earthen pot maker says, “We've received an order to make 1.25 lakh earthen lamps. There are around 40 families in this village, we've divided work among us” pic.twitter.com/iAUvFUe9FD
— ANI UP/Uttarakhand (@ANINewsUP) August 1, 2020
Advertisement
ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್‍ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಭೂಮಿ ಪೂಜೆಯಂದು ದಯವಿಟ್ಟು ಅಯೋಧ್ಯೆಗೆ ಬರಬೇಡಿ- ಟ್ರಸ್ಟ್ ಮನವಿ
Advertisement
ಕೇಂದ್ರದ ಮಾಜಿ ಸಚಿವೆ ಉಮಾಭಾರತಿ, ಮಾಜಿ ಸಿಎಂ ಕಲ್ಯಾಣ್ ಸಿಂಗ್‍ಗೆ ಆಹ್ವಾನ ಹೋಗಿದೆ. ರಾಮಮಂದಿರ ನಿರ್ಮಾಣ ಟ್ರಸ್ಟಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಧನ ಸಂಗ್ರಹಕ್ಕೆ ಕೊಂಕು ನುಡಿದವರಿಗೆ ತಿರುಗೇಟು ನೀಡಿದ್ದಾರೆ. ಒಳ್ಳೆಯ ಕೆಲಸಕ್ಕೆ ವಿಘ್ನ ಎದುರಾಗೋ ಸಾಮಾನ್ಯ ಅಂತ ಮಂದಿರ ವಿರೋಧಿಗಳ ಕಿವಿ ಹಿಂಡಿದ್ದಾರೆ. ಇತ್ತ ತುಮಕೂರು ಗ್ರಾಮಾಂತರ ಬಳಿ ಶ್ರೀರಾಮ ಸೃಷ್ಟಿಸಿದ ಎನ್ನಲಾಧ ನಾಮದ ಚಿಲುಮೆಯ ನೀರನ್ನು ಅಯೋಧ್ಯೆಗೆ ಕಳಿಸಿಕೊಡಲಾಗಿದೆ. ಇದನ್ನೂ ಓದಿ: ಅಯೋಧ್ಯೆಗೆ ದಾಳಿ ಮಾಡಲು ಐಎಸ್‍ಐ ಸಂಚು – ಗುಪ್ತಚರ ಇಲಾಖೆ