ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಪತ್ನಿಗೆ ಕೊರೊನಾ ಸೋಂಕು ತಗುಲಿತ್ತಿದ್ದಂತೆ ಅರವಿಂದ್ ಕೇಜ್ರಿವಾಲ್ ಐಸೋಲೇಟ್ ಆಗಿದ್ದಾರೆ.
ಸದ್ಯ ಮನೆಯಲ್ಲಿಯೇ ಸಿಎಂ ಪ್ರತ್ಯೇಕವಾಗಿ ಕ್ವಾರಂಟೈನ್ ಆಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ಇತ್ತ ಸಿಎಂ ಪತ್ನಿ ಸಹ ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್ ನಲ್ಲಿದ್ದಾರೆ. ಕಳೆದ ವರ್ಷವೂ ಕೊರೊನಾ ಗುಣಲಕ್ಷಣಗಳು ಕಂಡು ಬಂದ ಹಿನ್ನೆಲೆ ಸ್ವಯಂ ಕ್ವಾರಂಟೈನ್ ನಲ್ಲಿದ್ದು, ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಅಂದು ಅವರ ವರದಿ ನೆಗೆಟಿವ್ ಬಂದಿತ್ತು. ಇದನ್ನೂ ಓದಿ: ದೆಹಲಿ ಲಾಕ್‍ಡೌನ್ – ತವರಿನತ್ತ ಮುಖಮಾಡಿದ ವಲಸೆ ಕಾರ್ಮಿಕರು
ದಿನದಿಂದ ದಿನಕ್ಕೆ ದೆಹಲಿ ಸ್ಥಿತಿ ಬಿಗಡಾಯಿಸುತ್ತಿದ್ದು, ಸಿಎಂ ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಒಂದು ವಾರ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಲಾಕ್‍ಡೌನ್ ಘೋಷಣೆ ಆಗ್ತಿದ್ದಂತೆ ಪ್ರವಾಸಿ ಕಾರ್ಮಿಕರು ತವರಿನತ್ತ ಪ್ರಯಾಣ ಬೆಳೆಸುತ್ತಿದ್ದಾರೆ.