ಅಲಹಾಬಾದ್ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್ ಗ್ಯಾಂಗ್ ರೇಪ್ ಕೇಸ್ ನಡೆಯಬೇಕು – ಸುಪ್ರೀಂ

Public TV
2 Min Read
Supreme Court

ನವದೆಹಲಿ: ಉತ್ತರ ಪ್ರದೇಶ ಹತ್ರಾಸ್ ಗ್ಯಾಂಗ್‍ರೇಪ್ ಪ್ರಕರಣದ ತನಿಖೆ ಅಲಹಾಬಾದ್ ಹೈಕೋರ್ಟ್ ನಿಗಾದಲ್ಲಿ ನಡೆಯಬೇಕು. ಸದ್ಯ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ ಹೊರಗೆ ವರ್ಗಾಯಿಸುವುದು ಸೂಕ್ತವಲ್ಲ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.

Allahabad high court

ಸಾಮಾಜಿಕ ಕಾರ್ಯಕರ್ತ ಸತ್ಯಂ ದುಬೆ ಪ್ರಕರಣದ ತನಿಖೆ ಸುಪ್ರೀಂಕೋರ್ಟ್ ಕಣ್ಗಾವಲಿನಲ್ಲಿಯೇ ನಡೆಸಬೇಕೆಂದು ಪಿಐಎಲ್ ಸಲ್ಲಿಸಿದ್ದರು. ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಬೊಬ್ಡೆ ನೇತೃತ್ವದ ತ್ರಿಸದಸ್ಯ ಪೀಠ ಇಂದು ತನ್ನ ಅದೇಶವನ್ನು ಪ್ರಕಟಿಸಿತು. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣ – ಸಂತ್ರಸ್ತೆ ಕುಟುಂಬ ಹೊರಗಿಟ್ಟು 2.30ಕ್ಕೆ ಪೊಲೀಸರಿಂದ್ಲೇ ಅಂತ್ಯಕ್ರಿಯೆ!

Allahabad high court 1

ಪ್ರಕರಣದ ಸಂಪೂರ್ಣ ತನಿಖೆ ಅಲಹಬಾದ್ ಹೈಕೋರ್ಟ್ ಕಣ್ಗಾವಲಿನಲ್ಲಿ ನಡೆಯುತ್ತಿದೆ. ಆದ್ದರಿಂದ ಸುಪ್ರೀಂಕೋರ್ಟ್ ವೀಕ್ಷಣೆ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಪೀಠ ಸಂತ್ರಸ್ತೆಯ ಅಂತ್ಯಸಂಸ್ಕಾರ ತಡರಾತ್ರಿ ಅವಸರದಲ್ಲಿ ಪೊಲೀಸರು ನಡೆಸಿರುವ ಬಗ್ಗೆ ನ್ಯಾಯಾಲಯ ಪರಿಶೀಲಿಸುತ್ತಿದೆ ಎಂದು ಹೇಳಿದೆ. ಇದನ್ನೂ ಓದಿ: ಕೊನೆ ಬಾರಿ ಮಗಳ ಮುಖ ತೋರಿಸಲಿಲ್ಲ: ಹತ್ರಾಸ್ ಸಂತ್ರಸ್ತೆ ತಾಯಿ

HATHRAS ACCUSED

ಇದೇ ವೇಳೆ ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ ಅಫಿಡವಿಟ್ ಸ್ವೀಕರಿಸಿತು. ಸಂತ್ರಸ್ತೆ ಕುಟುಂಬ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳಿಗೆ ಭದ್ರತೆ ನೀಡುವುದು. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತನ್ನ ಅಫಿಡವಿಟ್ ನಲ್ಲಿ ತಿಳಿಸಿದೆ. ಸುಪ್ರೀಂಕೋರ್ಟ್ ಸಂತ್ರಸ್ತ ಕುಟುಂಬ ಮತ್ತು ಸಾಕ್ಷಿಗಳಿಗೆ ರಾಜ್ಯ ಸರ್ಕಾರ ಭದ್ರತೆ ನೀಡಬೇಕೆಂದು ಸೂಚಿಸಿತ್ತು. ಇಂದು ಸರ್ಕಾರ ರಕ್ಷಣೆ ನೀಡಿರುವ ಮಾಹಿತಿಯನ್ನ ಅಫಿಡವಿಟ್ ಮೂಲಕ ಸುಪ್ರೀಂಕೋರ್ಟಿಗೆ ಸಲ್ಲಿಸಿದೆ. ಇದನ್ನೂ ಓದಿ: ಮತ್ತೊಮ್ಮೆ ಭಾರತದ ಮಗಳು ಭೀಕರವಾಗಿ ಹಿಂಸೆಗೊಳಗಾಗಿದ್ದಾಳೆ: ಯುವರಾಜ್

hathras

ಏನಿದು ಹತ್ರಾಸ್ ಕೇಸ್?
ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದಾರೆ. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ಮೃತಪಟ್ಟಿದ್ದಳು. ಇದನ್ನೂ ಓದಿ: ಗ್ಯಾಂಗ್‍ರೇಪ್, ಸಾವು ಪ್ರಕರಣ – ಅಪರಾಧಿಗಳನ್ನ ಗಲ್ಲಿಗೇರಿಸಿಯೆಂದ ಅಕ್ಷಯ್‍ಗೆ ರಮ್ಯಾ ತಿರುಗೇಟು

Share This Article
Leave a Comment

Leave a Reply

Your email address will not be published. Required fields are marked *