– ಹಗುರುವಾಗಿ ಮಾತಾಡಬೇಡಿ ಸಿಎಂ ವಾರ್ನಿಂಗ್
ಬೆಂಗಳೂರು: ಅಸಮಾಧಾನ ಇದ್ದವರು ಬೇಕಾದ್ರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತಾಡೋದಕ್ಕೆ ನನ್ನ ಅಭ್ಯಂತರವಿಲ್ಲ. ಸಚಿವ ಸ್ಥಾನ ವಂಚಿತರು ಹಗುರವಾಗಿ ಮಾತನಾಡೋದು ಬೇಡ ಎಂದು ಅತೃಪ್ತರಿಗೆ ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
Advertisement
ಇಂದು ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ನಮ್ಮ ಯಾವುದೇ ಶಾಸಕರು ವಿರೋಧ ಇದ್ರೆ ದೆಹಲಿಗೆ ಹೋಗಲಿ. ವರಿಷ್ಠರಿಗೆ ದೆಹಲಿಗೆ ಹೋಗಿ ದೂರು ಕೊಡಲಿ. ಇಲ್ಲಿ ಮಾತಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಶಾಸಕರು ಮಾಡೋದು ಬೇಡ. ವರಿಷ್ಠರು ಸರಿ ತಪ್ಪು ಯಾವುದು ಅಂತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿ ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು.
Advertisement
Advertisement
ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಳ್ಳುವದರ ಜೊತೆ ಸಿಡಿ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸತೀಶ್ ರೆಡ್ಡಿ, ತಿಪ್ಪಾರೆಡ್ಡಿ, ಅರವಿಂದ್ ಬೆಲ್ಲದ್, ರೇಣುಕಾಚಾರ್ಯ, ಸಿದ್ದು ಸವದಿ, ಎಸ್.ಎ.ರಾಮದಾಸ್ ಸೇರಿದಂತೆ ಹಲವರು ತಮ್ಮ ಅಸಮಾಧಾನವನ್ನ ಹೊರ ಹಾಕಿದ್ದಾರೆ. ಈ ನಡುವೆ ಎಂಎಲ್‍ಸಿ ಹೆಚ್. ವಿಶ್ವನಾಥ್, ಸಿಎಂ ಕೊಟ್ಟ ಮಾತು ತಪ್ಪುವ ಮೂಲಕ ವಚನಭ್ರಷ್ಟರಾಗಿದ್ದಾರೆ. 17 ಜನರ ಭಿಕ್ಷೆಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿರೋದನ್ನ ಮರೆತ ಹಾಗೆ ಕಾಣಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.