ಗುವಾಹಟಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 5 ರೂ. ಕಡಿತಗೊಳಿಸಿ ಅಸ್ಸಾಂ ಸರ್ಕಾರ ಕ್ರಮ ಕೈಗೊಂಡಿದೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು 5 ರೂ. ಕಡಿಮೆ ಮಾಡಿದ್ದಕ್ಕೆ ಜನ ಸಂತಸಗೊಂಡಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಕಡಿತಗೊಳಿಸಿರುವುದು ಮಾತ್ರವಲ್ಲದೆ ಮದ್ಯದ ಮೇಲಿನ ಹೆಚ್ಚುವರಿ ಶೇ.25ರಷ್ಟು ಸೆಸ್‍ನ್ನು ಸಹ ಸರ್ಕಾರ ಕಡಿತಗೊಳಿಸಿದೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
Advertisement
Advertisement
ಇಂದು ನಡೆದ ವಿಧಾನಸಭೆ ಅಧಿವೇಶನದಲ್ಲಿ ಅಸ್ಸಾಂ ಹಣಕಾಸು ಸಚಿವ ಹಿಮಾಂತ ವಿಶ್ವಾಸ್ ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವುದಾಗಿ ಘೋಷಿಸಿದ್ದಾರೆ.
Advertisement
ಕೊರೊನಾ ಕಾರಣದಿಂದಾಗಿ ಪೆಟ್ರೋಲ್, ಡೀಸೆಲ್ ಹಾಗೂ ಮದ್ಯದ ಮೇಲೆ ಹೆಚ್ಚುವರಿ ಸೆಸ್ ವಿಧಿಸಲಾಗಿತ್ತು. ಇದೀಗ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಹೀಗಾಗಿ ಈ ಹೆಚ್ಚುವರಿ ಸೆಸ್ ಕಡಿತಗೊಳಿಸುವ ಕ್ರಮ ಕೈಗೊಳ್ಳಲಾಗಿದೆ. ಈ ಮನವಿಗೆ ಒಪ್ಪಿದ್ದಕ್ಕೆ ನಾನು ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ. ಇದರಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ 5 ರೂ. ಕಡಿಮೆಯಾಗಲಿದೆ. ಈ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಇದರಿಂದಾಗಿ ಅಸ್ಸಾಂನ ಲಕ್ಷಾಂತರ ಜನರಿಗೆ ಸಹಾಯವಾಗಲಿದೆ ಎಂದು ಶರ್ಮಾ ತಮ್ಮ ವಿಧಾನಸಭೆ ಭಾಷಣದಲ್ಲಿ ಹೇಳಿದ್ದಾರೆ.
Advertisement
ಜನವರಿ 6ರಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಭಾರೀ ಪ್ರಮಾಣದ ಏರಿಕೆಯಾಗಿದ್ದು, ಕೆಲವೆಡೆ 100ರೂ. ಸನಿಹಕ್ಕೆ ತಲುಪುತ್ತಿದೆ. ಅಲ್ಲದೆ ಕಳೆದ ಕೆಲ ತಿಂಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಿಲ್ಲ. ವಿಶ್ವ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದಾಗಿ ಪೆಟ್ರೋಲ್ ಡೀಸೆಲ್ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
ಮಾರ್ಚ್, ಏಪ್ರಿಲ್‍ನಲ್ಲಿ ಅಸ್ಸಾಂ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಹೀಗಾಗಿ ಸರ್ವಾನಂದ ಸೋನೊವಾಲ್ ನೇತೃತ್ವದ ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್ ದರವನ್ನು ಕಡಿತಗೊಳಿಸಿದೆ.