ಧಾರವಾಡ: ಪ್ರೆಷರ್ ಕುಕ್ಕರ್‍ನ ಬಿಡಿಭಾಗಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಧಗ ಧಗನೆ ಹೊತ್ತಿ ಉರಿದ ಘಟನೆ ನಗರದ ಬೈಪಾಸ್‍ನ ಮನ್ಸೂರ ಗ್ರಾಮದ ಕ್ರಾಸ್ ಬಳಿ ನಡೆದಿದೆ.
ಬೆಳಗಾವಿಯಿಂದ ಹುಬ್ಬಳ್ಳಿಯ ಕಡೆ ಪ್ರೆಷರ್ ಕುಕ್ಕರ್ ನ ಬಿಡಿಭಾಗಗಳನ್ನು ಈ ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಮಧ್ಯಾಹ್ನ ಬಿಸಿಲು ಹೆಚ್ಚಿದ್ದಾಗಲೇ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡಿದೆ. ಕರೆ ಮಾಡಿ ಅವಘಡದ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ ತಕ್ಷಣವೇ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಆದರೂ ಲಾರಿಯಲ್ಲಿದ್ದ ಸಾಮಗ್ರಿಗಳೆಲ್ಲ ಸುಟ್ಟು ಭಸ್ಮವಾಗಿವೆ.
ಸದ್ಯ ಸ್ಥಳಕ್ಕೆ ಧಾರವಾಡ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸಿದ್ದಾರೆ.