ಹುಬ್ಬಳ್ಳಿ: ಎಪಿಎಂಸಿಗೆ ಮೆಣಸಿನಕಾಯಿ ಕೊಂಡೊಯ್ಯುತ್ತಿದ್ದ ಟಾಟಾ ಏಸ್ ವಾಹನದಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿ ವಾಹನವೆಲ್ಲಾ ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ಹೊರವಲಯದ ಚಾಲುಕ್ಯ ನಗರದಲ್ಲಿ ನಡೆದಿದೆ.
ಮಾರುತೆಪ್ಪ ದುರ್ಗಮ್ಮಣ್ಣವರ ಅವರಿಗೆ ಸೇರಿದ ಟಾಟಾ ಏಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು. ವಾಹನದಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ಮೆಣಸಿಕಾಯಿ ಸಹ ಸುಟ್ಟು ಕರಕಲಾಗಿವೆ.
ಘಟನೆ ನಡೆದಿರುವುದು ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಬೆಂಕಿಯನ್ನು ನಂದಿಸಿದ್ದಾರೆ. ನಡುರಸ್ತೆಯಲ್ಲೇ ವಾಹನ ಬೆಂಕಿಗೆ ಆಹುತಿಯಾದ ಪರಿಣಾಮ ಕೆಲಕಾಲ ಇತರ ವಾಹನ ಸವಾರರು ಆತಂಕಕ್ಕೆ ಒಳಗಾಗಿದ್ದರು. ಅಲ್ಲದೆ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಬೆಂಕಿ ನಂದಿಸುವ ಕಾರ್ಯ ಮುಗಿದ ನಂತರ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಘಟನೆ ಕುರಿತು ಕೇಶ್ವಾಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.