ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ರಮೇಶ್ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಆದರೆ ಈ ಸಾವಿಗೆ ಅಸಲಿ ಕಾರಣ ಸಿಕ್ಕಿದ್ದು ಸಕಾಲದಲ್ಲಿ ಆಕ್ಸಿಜನ್ ಸಿಗದ ಕಾರಣ ಮೃತಪಟ್ಟ ವಿಚಾರ ಬೆಳಕಿಗೆ ಬಂದಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರಮೇಶ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಏ.13ರಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಉಸಿರಾಟದ ಸಮಸ್ಯೆ ಮಾತ್ರ ಅಲ್ಲದೇ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.
Advertisement
Advertisement
ವೆಂಟಿಲೇಟರ್ ಬೆಡ್ ನಲ್ಲಿ ಚಿಕಿತ್ಸೆ ಪಡೆಯುತ್ತದ್ದ ರಮೇಶ್ ಅವರಿಗೆ ಇಂದು ಆಕ್ಸಿಜನ್ ಕೊರತೆಯಾಗಿದೆ. ಸರಿಯಾದ ಸಮಯದಲ್ಲಿ ಆಕ್ಸಿಜನ್ ಆಸ್ಪತ್ರೆಯಲ್ಲಿ ದೊರೆಯದ ಕಾರಣ ರಮೇಶ್ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
Advertisement
ನಮ್ಮ ಕ್ಷೇತ್ರದ ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ ನನ್ನ ಆಪ್ತ ಸಹಾಯಕ ಎಚ್‌ಜೆ ರಮೇಶ್ ಇನ್ನಿಲ್ಲ. ರಮೇಶ್ ಸುಮಾರು 8 ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಸುರೇಶ್ ಕುಮಾರ್ ಕಂಬನಿ ಮಿಡಿದಿದ್ದಾರೆ.