ಧಾರವಾಡ: ಅಗಸ್ಟ್ 22ರಿಂದ ಸೆಪ್ಟಂಬರ್ 4ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಸಮಾರಂಭ, ಸಂಗೀತ, ನೃತ್ಯ, ಮುಂತಾದ ಮನರಂಜನಾ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.
Advertisement
Advertisement
ಗಣೇಶ ಮೂರ್ತಿಯನ್ನು ತಮ್ಮ ಮನೆಯ ಆವರಣದಲ್ಲಿ, ನೀರಿನ ಬ್ಯಾರಲ್, ಬಕೆಟ್‍ಗಳಲ್ಲಿ ವಿಸರ್ಜನೆ ಮಾಡಬೇಕು. ಯಾವುದೇ ರೀತಿಯಾಗಿ ಜನ ಸಂದಣಿ ಉಂಟು ಮಾಡಬಾರದು. ಭಕ್ತಾದಿಗಳಿಗೆ ಸ್ಯಾನಿಟೈಸರ್, ಮಾಸ್ಕ್ ಧರಿಸಲು ಸೂಚಿಸಬೇಕು, ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು, ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.