– 3 ವರ್ಷದ ಬಾಲಕಿ ಮೇಲೆ ರೇಪ್
– 14, 15 ವಯಸ್ಸಿನ ಬಾಲಕರಿಂದ ಕೃತ್ಯ
ಮುಂಬೈ: ಮೂರು ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿರುವ ಘಟನೆ ಮುಂಬೈನ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನದಲ್ಲಿ ನಡೆದಿದೆ.
ಅಪ್ರಾಪ್ತರನ್ನು ೧೪ ಮತ್ತು ೧೫ ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದೆ. ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಳು. ಅವಳನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಬಾಲಕಿ ನೋವಿನಿಂದ ಅಳುತ್ತಿರುವುದನ್ನು ಗಮನಿಸಿದ ಪೋಷಕರು ಆಕೆಯನ್ನು ವಿಚಾರಿಸಿದಾಗ ನಡೆದಿರುವ ಘಟನೆಯ ಬಗ್ಗೆ ಬಾಲಕಿ ಹೇಳಿದ್ದಾಳೆ. ಈ ವೇಳೆ ಆರೋಪಿಗಳ ಹೆಸರನ್ನು ಬಾಲಕಿ ಹೇಳಿದ್ದಾಳೆ. ಸಂತ್ರಸ್ತೆಯ ಪೋಷಕರು ಕಸ್ತೂರ್ಬಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಗಳ ವಿರುದ್ಧ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಆರೋಪಿಗಳನ್ನು ಬಂಧಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.