ಹೈದರಾಬಾದ್: ಪದವಿ ವಿದ್ಯಾರ್ಥಿಯ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ ಹೈದರಾಬಾದ್‍ನ ಘಟ್ಕಸರ್ ನಲ್ಲಿ ಬುಧವಾರ ನಡೆದಿದೆ.
ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ವಾಪಸ್ಸಾಗುತ್ತಿದ್ದಳು. ಈ ಸಂದರ್ಭದಲ್ಲಿ ಮನೆಗೆ ತೆರಳಲೆಂದು ಆಕೆ ಆಟೋ ಹತ್ತಿದ್ದಾಳೆ. ಆದರೆ ಚಾಲನ ಇದೇ ಸಮಯದಲ್ಲಿ ಆಕೆಯನ್ನು ಕಿಡ್ನಾಪ್ ಮಾಡಿ ನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲದೆ ಪೊದೆಯ ಬಳಿ ಆಕೆಯನ್ನು ಎಳೆದುಕೊಂಡು ಹೋಗಿ ತನ್ನ ಕಾಮ ತೃಷೆ ತೀರಿಸಿಕೊಂಡಿದ್ದಾನೆ.
ಅತ್ಯಾಚಾರ ಎಸಗಿದ ಬಳಿಕ ಚಾಲಕ ತನ್ನ ಆಟೋದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಇತ್ತ ವಿದ್ಯಾರ್ಥಿನಿ ರಸ್ತೆ ಬದಿ ಬಂದು ಸಹಾಯಕ್ಕಾಗಿ ಅಂಗಲಾಚಿದ್ದಾಳೆ. ಈ ವಿಚಾರ ಬಯಲಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಕುಡಲೇ ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಘಟನೆ ಸಂಬಂಧ ಘಟ್ಕಸರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.