ವಿಜಯಪುರ: ಆಟವಾಡುತ್ತಿದ್ದ ಬಾಲಕರಿಬ್ಬರು ಆಯತಪ್ಪಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕ ಆಸಂಗಿ ಗ್ರಾಮದಲ್ಲಿ ನಡೆದಿದೆ.
ಮೃತ ಮಕ್ಕಳನ್ನು ಚಿಕ್ಕ ಆಸಂಗಿ ಗ್ರಾಮದ ಆಕಾಶ ಬೆನ್ನೂರು (4) ಹಾಗೂ ಬೊರಮ್ಮ ಬೆನ್ನೂರು (4) ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳು ಆಟವಾಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.
ಮನೆಯ ಹತ್ತಿರ ಇರುವ ಚಿಕ್ಕಪ್ಪನ ತೋಟದ ಕೃಷಿ ಹೊಂಡದ ಬಳಿ ಇಬ್ಬರು ಆಟವಾಡುತ್ತಿದ್ದರು. ಈ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಸಾವೀಗಿಡಾಗಿದ್ದಾರೆ ಎನ್ನಲಾಗಿದೆ. ಪುಟ್ಟ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮಾಹಿತಿ ಬಂದ ತಕ್ಷಣ ಕೊಲ್ಹಾರ ಪೊಲೀಸರು ಸ್ಥಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಕೃಷಿಹೊಂಡದಿಂದ ಹೊರತೆಗೆದಿದ್ದಾರೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.