ಬೆಂಗಳೂರು: ಆಮ್ಲಜನಕ ಪೂರೈಸುವುದಕ್ಕೆ ಸರ್ಕಾರ ಏದುಸಿರು ಬಿಡುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರೈತರಿಗೂ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಶಕ್ತವಾಗಿದೆ. ಆಡಿದ ಮಾತು, ಬಿಟ್ಟ ಬಾಣ, ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳಿ ಬಾರವು ಎಂದು ಮಾತಿನ ಛಾಟಿ ಬೀಸಿದ್ದಾರೆ.
Advertisement
ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರೈತರಿಗೂ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಶಕ್ತವಾಗಿದೆ. ಆಡಿದ ಮಾತು ಬಿಟ್ಟ ಬಾಣ ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳಿ ಬಾರವು. pic.twitter.com/0D0tqlL7FL
— Dr Sudhakar K (@mla_sudhakar) August 20, 2020
Advertisement
ಹೆಚ್‍ಡಿಕೆ ಹೇಳಿದ್ದೇನು?
ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು.

1/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 20, 2020
Advertisement
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು.

2/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 20, 2020
ವಾಡಿಕೆಗಿಂತ ಈ ಬಾರಿ ರಾಜ್ಯದಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು.

3/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 20, 2020
ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಹೆಚ್‍ಡಿಕೆ ಸರಣಿ ಟ್ವೀಟ್ ಮಾಡಿ ಸರ್ಕಾರವನ್ನು ಒತ್ತಾಯಿಸಿದ್ದರು.
ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ.
4/4