ಬೆಂಗಳೂರು: ಕೊರೊನಾ ಸೋಂಕು ಕಾಣಿಸಿಕೊಂಡು ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಮುಖ್ಯಮಂತ್ರಿ ಬಿಎಸ್‍ವೈ ಅವರು ಕೊರೊನಾ ಬಂತು ಎಂದು ಆತಂಕ ಪಡಬೇಡಿ, ಮುನ್ನೆಚ್ಚರಿಕೆ ವಹಿಸಿ ಎಂದು ಸಲಹೆ ನೀಡಿದ್ದಾರೆ.
— B.S.Yediyurappa (@BSYBJP) August 10, 2020
ಆಸ್ಪತ್ರೆಯಿಂದ ಹೊರ ಬರುವುದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಸಿಎಂ, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದೇನೆ. ನಿಮ್ಮೆಲ್ಲರ ಶುಭಹಾರೈಕೆಗಳಿಂದ ಗುಣಮುಖನಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ. ಆತ್ಮವಿಶ್ವಾಸ, ವೈದ್ಯಕೀಯ ಚಿಕಿತ್ಸೆಗಳಿಂದ ಕೊರೊನಾ ಗೆಲ್ಲಬಹುದು. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ ಎಂದು ಬರೆದುಕೊಂಡಿದ್ದರು.
ಆಸ್ಪತ್ರೆಗೆ ದಾಖಲಾದ ಬಳಿಕ ಮುಖ್ಯಮಂತ್ರಿಗಳು ಎರಡನೇ ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಸೋಮವಾರ ಬೆಳಗ್ಗೆ ವರದಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ನೇರವಾಗಿ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.
ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದೇನೆ. ನಿಮ್ಮೆಲ್ಲರ ಶುಭಹಾರೈಕೆಗಳಿಂದ ಗುಣಮುಖನಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ. ಆತ್ಮವಿಶ್ವಾಸ, ವೈದ್ಯಕೀಯ ಚಿಕಿತ್ಸೆಗಳಿಂದ ಕೊರೋನಾ ಗೆಲ್ಲಬಹುದು. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ.
— B.S.Yediyurappa (@BSYBJP) August 10, 2020
ಬಿಬಿಎಂಪಿ, ಆರೋಗ್ಯ ಇಲಾಖಾ ಅಧಿಕಾರಿಗಳು ಆಗಸ್ಟ್ 4 ರಂದು ಸಿಎಂ ಕಚೇರಿ ಮತ್ತು ಮನೆಯ ಮುಂದೆ ಆ. 2 ರಿಂದ 16 ರವರೆಗೂ ಪ್ರವೇಶ ನಿರಾಕರಣೆ ಮಾಡಿ ಪೋಸ್ಟರ್ ಅಂಟಿಸಿದ್ದಾರೆ. ಆಗಸ್ಟ್ 16 ರವರೆಗೂ ಸಿಎಂ ಬಿಎಸ್ ಯಡಿಯೂರಪ್ಪ ಹೋಂ ಕ್ವಾರಂಟೈನ್ ಹಿನ್ನೆಲೆಯಲ್ಲಿ ಯಾರಿಗೂ ಪ್ರವೇಶವಿಲ್ಲ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.