ಮಂಗಳೂರು: ಆನ್‍ಲೈನ್ ಕ್ಲಾಸ್ ಗಾಗಿ ವಿದ್ಯಾರ್ಥಿಗಳು ದಿನವಿಡೀ ದಟ್ಟ ಅರಣ್ಯದಲ್ಲಿ ಟೆಂಟ್ ಹಾಕಿ ಕುಳಿತು ಶಿಕ್ಷಣ ಕಲಿಯಬೇಕಾದ ಅನಿವಾರ್ಯ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.
Advertisement
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಆನ್‍ಲೈನ್ ಕ್ಲಾಸ್ ಆರಂಭಿಸಲು ಸೂಚಿಸಿದೆ. ನೆಟ್ ವರ್ಕ್ ಇಲ್ಲದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ವಿದ್ಯಾರ್ಥಿಗಳು ಆನ್ ಲೈನ್ ಕ್ಲಾಸ್ ಗಾಗಿ ಸಮೀಪದ ಪೆರ್ಲ ಬೈಕರ ಗುಡ್ಡದಲ್ಲಿ ಟೆಂಟ್ ಹಾಕಿದ್ದಾರೆ. ಅರಣ್ಯದ ತುತ್ತ ತುದಿಯಲ್ಲಿ ಮಾತ್ರ ನೆಟ್‍ವರ್ಕ್ ಸಿಗೋದ್ರಿಂದ ಅಲ್ಲಿ ಬಟ್ಟೆಗಳಿಂದಲೇ ನಿರ್ಮಿಸಿದ ಟೆಂಟ್ ನಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ ನಾಲ್ಕು ಗಂಟೆಯವರೆಗೂ ವಿದ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ಗೆ ಹಾಜರಾಗುತ್ತಿದ್ದಾರೆ.
Advertisement
Advertisement
ದಟ್ಟ ಅರಣ್ಯದಲ್ಲಿ ಕಾಡಾನೆ ಉಪಟಳದ ಜೊತೆಗೆ ಕಾಡು ಮೃಗಗಳ ದಾಳಿಯ ಭೀತಿಯ ಜೀವ ಭಯದಿಂದ, ಸೊಳ್ಳೆಗಳ ಕಾಟದೊಂದಿಗೆ ವಿದ್ಯಾರ್ಥಿಗಳು ಅನಿವಾರ್ಯವಾಗಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಪೋಷಕರು ಆತಂಕದಿಂದಲೇ ಮಕ್ಕಳನ್ನು ಅರಣ್ಯಕ್ಕೆ ಕಳಿಸುತ್ತಿದ್ದು ಊಟ, ತಿಂಡಿಯೊಂದಿಗೆ ಪೋಷಕರೂ ಕಾಡಿಗೆ ಹೋಗುತ್ತಿದ್ದಾರೆ. ಸ್ಥಳೀಯ ಶಾಸಕ ಹರೀಶ್ ಪೂಂಜಾರ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಯದೇ ಕಳೆದ ಕೆಲ ದಿನಗಳಿಂದ ಇದೇ ಪರಿಸ್ಥಿತಿ ಇದೆ.
Advertisement