Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಮ್ಲಜನಕ, ರೆಮ್‌ಡಿಸಿವಿರ್ ಹೆಚ್ಚುವರಿ ಪೂರೈಕೆ: ಪ್ರಧಾನಿ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಮ್ಲಜನಕ, ರೆಮ್‌ಡಿಸಿವಿರ್ ಹೆಚ್ಚುವರಿ ಪೂರೈಕೆ: ಪ್ರಧಾನಿ ಭರವಸೆ

Bengaluru City

ಆಮ್ಲಜನಕ, ರೆಮ್‌ಡಿಸಿವಿರ್ ಹೆಚ್ಚುವರಿ ಪೂರೈಕೆ: ಪ್ರಧಾನಿ ಭರವಸೆ

Public TV
Last updated: April 23, 2021 3:59 pm
Public TV
Share
3 Min Read
cm bsy modi corona covid 19 e1619172117368
SHARE

ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್‌ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ರಾಜ್ಯ ಸರ್ಕಾರಗಳೂ ಪರಸ್ಪರ ಸಹಕರಿಸುವ ಮೂಲಕ ಸವಾಲನ್ನು ಸಮರ್ಥವಾಗಿ ಎದುರಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ವಿಷಯ ತಿಳಿಸಿದರು. ಈಗ ಎದುರಾಗಿರುವ ವಿಪತ್ತನ್ನು ಎದುರಿಸಲು ಆರೋಗ್ಯ ಸೇವಾ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡುವುದು, ಮುನ್ನೆಚ್ಚರಿಕೆಯ ಕ್ರಮಗಳ ಕಟ್ಟುನಿಟ್ಟಿನ ಪಾಲನೆ, ಅನಗತ್ಯ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸುವುದು ಹಾಗೂ ಆಮ್ಲಜನಕದ ಸಮರ್ಪಕ ಹಾಗೂ ಮಿತಬಳಕೆಗೆ ಆದ್ಯತೆ ನೀಡುವುದು ಹಾಗೂ ಜನರಲ್ಲಿ ವಿಶ್ವಾಸ ಮೂಡಿಸುವುದು ಅತಿ ಅಗತ್ಯ ಎಂದು ಪ್ರಧಾನ ಮಂತ್ರಿಯವರು ತಿಳಿಸಿದರು.

ಆರೋಗ್ಯ ಸಚಿವ @mla_sudhakar, ಗೃಹ ಸಚಿವ @BSBommai ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಉಪಸ್ಥಿತರಿದ್ದು, ಈ ಸಭೆಯಲ್ಲಿ ಭಾಗವಹಿಸಿದ್ದರು. (2/2)#KarnatakaFightsCorona#Unite2FightCorona

— CM of Karnataka (@CMofKarnataka) April 23, 2021

ಆಮ್ಲಜನಕದ ದುರ್ಬಳಕೆ ಯಾಗದಂತೆ ಎಲ್ಲ ರಾಜ್ಯಗಳಲ್ಲೂ ಆಕ್ಸಿಜನ್ ಆಡಿಟ್ ಮಾಡಿಸುವಂತೆ ಪ್ರಧಾನ ಮಂತ್ರಿಯವರು ಸಲಹೆ ನೀಡಿದರು. ಜೊತೆಗೆ ಆಮ್ಲಜನಕದ ಟ್ಯಾಂಕರ್‌ಗಳ ಸುಗಮ ಸಂಚಾರಕ್ಕೆ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಆಮ್ಲಜನಕ ಮತ್ತು ರೆಮ್‌ಡಿಸಿವಿರ್ ಸದ್ಬಳಕೆಯಾಗುವ ನಿಟ್ಟಿನಲ್ಲಿ ಆತಂಕದ ಕೊಳ್ಳುವಿಕೆಯನ್ನು ನಿಯಂತ್ರಿಸುವಂತೆ ಅವರು ಸಲಹೆ ಮಾಡಿದರು. ಹೆಚ್ಚುತ್ತಿರುವ ಪ್ರಕರಗಳಿಂದಾಗ ಮಾನವ ಸಂಪನ್ಮೂಲ ಅಗತ್ಯತೆಯೂ ಹೆಚ್ಚುತ್ತಿದ್ದು, ಇತ್ತೀಚೆಗೆ ನಿವೃತ್ತರಾದ ಸಿಬ್ಬಂದಿಯ ಸೇವೆ ಬಳಕೆ ಮಾಡಿಕೊಳ್ಳಿ ಎಂದು ಪ್ರಧಾನ ಮಂತ್ರಿಯವರು ತಿಳಿಸಿದರು.

cng oxygen plant 2

ಆಮ್ಲಜನಕ ಪೂರೈಕೆಗೆ ಮನವಿ:
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳುತ್ತಿರುವ ಕ್ರಮಗಳು ಹಾಗೂ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಿದರು.

ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರಾಜ್ಯಕ್ಕೆ ದಿನಕ್ಕೆ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಆಮ್ಲಜನಕದ ಬಳಕೆ ದಿನೇ ದಿನೇ ಹೆಚ್ಚುತ್ತಿದ್ದು, ನಿನ್ನೆ ರಾಜ್ಯದಲ್ಲಿ 500 ಟನ್ ಬಳಕೆಯಾಗಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಹಲವು ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗುವುದು.

OXYGEN

ಭಾರತ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯಕ್ಕೆ ಏಪ್ರಿಲ್ 25 ರಿಂದ 1142 ಟನ್ ಆಮ್ಲಜನಕ ಅಗತ್ಯವಿದೆ ಹಾಗೂ ಏಪ್ರಿಲ್ 30ರ ನಂತರ 1471 ಟನ್ ಆಮ್ಲಜನಕದ ಅಗತ್ಯವಿದೆ. ಆಮ್ಲಜನಕ ಕೊರತೆ ನೀಗಿಸಿ, ಕೂಡಲೇ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿಗಳು ಪ್ರಧಾನಿಯವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪಾಸಿಟಿವಿಟಿ ದರ ಶೇ.16 ರಷ್ಟಿದೆ. ಬೆಂಗಳೂರು ನಗರ ಅತಿ ಹೆಚ್ಚು ಪೀಡಿತವಾಗಿದ್ದು, ತುಮಕೂರು, ಬಳ್ಳಾರಿ, ಮೈಸೂರು, ಹಾಸನ ಮತ್ತು ಕಲಬುರಗಿ ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ.

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ತಡೆಯಲು ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಜೊತೆಗೆ ಇತರ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ರಾಜ್ಯದ ಆರ್ಥಿಕ ಚಟುವಟಿಕೆಗಳ ಮೇಲೆ ಕನಿಷ್ಠ ಪರಿಣಾಮವಾಗುವ ರೀತಿಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಕಳೆದ ಆರು ತಿಂಗಳಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ವಹಿಸಿದ್ದು, ಇದೀಗ ಅನುಕೂಲವಾಗಿದೆ. ಸರ್ಕಾರದ ಶಿಫಾರಸಿನ ಮೇರೆಗೆ ರೋಗಿಗಳನ್ನು ದಾಖಲಿಸಲು ಖಾಸಗಿ ಆಸ್ಪತ್ರೆಗಳ ಶೇ.50 ರಷ್ಟು ಹಾಸಿಗೆಗಳನ್ನು ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಬಂದರೆ ಅನುವಾಗುವಂತೆ ಖಾಸಗಿ ಆಸ್ಪತ್ರೆಗಳು ಸಮೀಪದ ಹೋಟೆಲ್ ಗಳ ಸಹಯೋಗದೊಂದಿಗೆ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ. ಐಸಿಯು ಸೌಲಭ್ಯಗಳಿರುವ ಫೀಲ್ಡ್ ಆಸ್ಪತ್ರೆಗಳನ್ನು ಸ್ಥಾಪಿಸಲು ಸಹ ಚಿಂತನೆ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ರೆಮ್ ಡಿಸಿವಿರ್ ಕೊರತೆಯಾಗದಂತೆ ಎಚ್ಚರ ವಹಿಸಲಾಗುತ್ತಿದ್ದು, ಮುಂದಿನ 10 ದಿನಗಳಿಗೆ 2 ಲಕ್ಷ ಡೋಸ್ ಗಳಷ್ಟು ರೆಮ್ ಡಿಸಿವಿರ್ ಒದಗಿಸುವಂತೆ ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಮುಖ್ಯಮಂತ್ರಿಗಳು, ನಗರದ 8 ವಲಯಗಳ ಕೋವಿಡ್ ನಿರ್ವಹಣೆ ಉಸ್ತುವಾರಿಗೆ ಸಚಿವರನ್ನು ನೇಮಕ ಮಾಡಲಾಗಿದೆ. ಹಿರಿಯ ಐಎಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಲಸಿಕೆ ಕಾರ್ಯಕ್ರಮದ ಪ್ರಗತಿಯೂ ಉತ್ತಮವಾಗಿದ್ದು, ಈ ವರೆಗೆ 82 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಮೇ 1 ರಿಂದ ಹೊಸ ಲಸಿಕಾ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೂ ಲಸಿಕೆಗಳು ಸಮಾನವಾಗಿ ಹಂಚಿಕೆಯಾಗುವಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಮನವಿ ಮಾಡಿದರು.

TAGGED:CoronaCovid19karnatakanarendra modiYediyurappaಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – ವಿಂಡೀಸ್‌ ವಿರುದ್ಧ ಗೆದ್ದರೆ ಭಾರತ ಸೆಮಿಸ್‌ಗೆ

Public TV
By Public TV
26 minutes ago
daily horoscope dina bhavishya
Astrology

ದಿನ ಭವಿಷ್ಯ: 27-02-2026

Public TV
By Public TV
27 minutes ago
meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
8 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
8 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
9 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?