ಬೆಂಗಳೂರು: ದೇಶದ ಜನತೆಗೆ ಉಚಿತ ಆರೋಗ್ಯ ಸೇವೆ ಒದಗಿಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ಕೊರೊನಾ ಚಿಕಿತ್ಸೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು. ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ನಾನು ಈ ಮೂಲಕ ಆಗ್ರಹಿಸುತ್ತೇನೆ.
1/3
— H D Kumaraswamy (@hd_kumaraswamy) May 12, 2021
Advertisement
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಆಯುಷ್ಮಾನ್ ಭಾರತ್ ಅಡಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ಕೊಡಿ. ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು. ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕೆಂದು ಈ ಮೂಲಕ ಆಗ್ರಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Advertisement
ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಯೋಜನೆ ವ್ಯಾಪ್ತಿಗೆ ಕೋವಿಡ್ ಅನ್ನೂ ಸೇರಿಸುವುದು ಅಗತ್ಯವಾಗಿದೆ.
2/3
— H D Kumaraswamy (@hd_kumaraswamy) May 12, 2021
Advertisement
ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂ. ಗಳವರೆಗೆ ಶೇ.30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಯೋಜನೆ ವ್ಯಾಪ್ತಿಗೆ ಕೋವಿಡ್ ನ್ನೂ ಸೇರಿಸುವುದು ಅಗತ್ಯವಾಗಿದೆ ಎಂದಿದ್ದಾರೆ.
Advertisement
ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ?
ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ.
4/4
— H D Kumaraswamy (@hd_kumaraswamy) May 12, 2021
ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೊರೊನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಒತ್ತಾಯಿಸಿದ್ದಾರೆ.