ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾದಿಂದ ಗುಣಮುಖರಾಗಿದ್ದಾರೆ.
ಆಗಸ್ಟ್ -9 ರಂದು ಆಸ್ಪತ್ರೆ ಗೆ ದಾಖಲಾಗಿದ್ದ ಸಚಿವ ಶ್ರೀರಾಮುಲು ಕೊರೋನಾದಿಂದ ಚೇತರಿಸಿಕೊಂಡಿದ್ದು ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
ಸರ್ಕಾರಿ ಆಸ್ಪತ್ರೆ ಯಲ್ಲೇ ಚಿಕಿತ್ಸೆ ಪಡೆದುಕೊಂಡಿದ್ದ ಶ್ರೀರಾಮುಲು ರಿಪೋರ್ಟ್ ನೆಗೆಟಿವ್ ಬಂದಿದ್ದು, ಎಂಟು ದಿನಗಳಲ್ಲಿ ಚೇತರಿಕೆ ಕಂಡಿದ್ದಾರೆ.
Advertisement
ಆತ್ಮೀಯರೆ,
ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ.
ಕೋವಿಡ್ ಸೋಂಕು ದೃಢಪಟ್ಟಾಗ ನಮ್ಮ ಸರ್ಕಾರಿ ಸ್ವಾಮ್ಯದ ಬೌರಿಂಗ್ ಆಸ್ಪತ್ರೆಗೆ ದಾಖಲಾದೆ. ಅಲ್ಲಿನ ಅತ್ಯುತ್ತಮ ಚಿಕಿತ್ಸೆಯಿಂದ ಶೀಘ್ರವಾಗಿ ಗುಣಮುಖನಾಗಿದ್ದೇನೆ. 1/3 pic.twitter.com/KD4Y4YGcpe
— B Sriramulu (@sriramulubjp) August 16, 2020
Advertisement
ಟ್ವೀಟ್ ಮಾಡಿರುವ ಶ್ರೀರಾಮುಲು, ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ. ಕೋವಿಡ್ ಸೋಂಕು ದೃಢಪಟ್ಟಾಗ ನಮ್ಮ ಸರ್ಕಾರಿ ಸ್ವಾಮ್ಯದ ಬೌರಿಂಗ್ ಆಸ್ಪತ್ರೆಗೆ ದಾಖಲಾದೆ. ಅಲ್ಲಿನ ಅತ್ಯುತ್ತಮ ಚಿಕಿತ್ಸೆಯಿಂದ ಶೀಘ್ರವಾಗಿ ಗುಣಮುಖನಾಗಿದ್ದೇನೆ ಎಂದಿದ್ದಾರೆ.
Advertisement
3/3
ಆಸ್ಪತ್ರೆಯಲ್ಲಿದ್ದಷ್ಟೂ ಕಾಲ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಬಂಧುಗಳು, ಸ್ನೇಹಿತರು, ಹಿತೈಷಿಗಳು ಹಾಗೂ ಅಭಿಮಾನಿಗಳೆಲ್ಲರಿಗೂ ಕೃತಜ್ಞತೆಗಳು.
ಇದೇ ಸಂದರ್ಭದಲ್ಲಿ, ತಮ್ಮ ಸಂಪೂರ್ಣ ಸಹಕಾರ ನೀಡಿದ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಹೋದ್ಯೋಗಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು.#Covid19#Bowring_And_Lady_Curzon_Hospitals
— B Sriramulu (@sriramulubjp) August 16, 2020
ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳ ತಜ್ಞ ವೈದ್ಯರ ತಂಡ ಮತ್ತು ವೈದ್ಯಕೀಯ ಸಿಬ್ಬಂದಿ ನೀಡಿದ ಕಾಳಜಿಪೂರ್ಣ ಚಿಕಿತ್ಸೆ, ಪ್ರೀತಿಪೂರ್ವಕ ಆರೈಕೆಯಿಂದ ಹೃದಯ ತುಂಬಿ ಬಂದಿದೆ, ನನ್ನನ್ನು ಮೂಕನನ್ನಾಗಿಸಿದೆ. ಅವರೆಲ್ಲರಿಗೂ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು. ಆಸ್ಪತ್ರೆಯಲ್ಲಿದ್ದಷ್ಟೂ ಕಾಲ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಬಂಧುಗಳು, ಸ್ನೇಹಿತರು, ಹಿತೈಷಿಗಳು ಹಾಗೂ ಅಭಿಮಾನಿಗಳೆಲ್ಲರಿಗೂ ಕೃತಜ್ಞತೆಗಳು. ಇದೇ ಸಂದರ್ಭದಲ್ಲಿ, ತಮ್ಮ ಸಂಪೂರ್ಣ ಸಹಕಾರ ನೀಡಿದ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಹೋದ್ಯೋಗಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.