ನವದೆಹಲಿ: ರಕ್ಷಣಾ ಇಲಾಖೆಗೆ ಅವಶ್ಯವಿರುವ 101 ವಿವಿಧ ಉಪಕರಣಗಳನ್ನು ಭಾರತದಲ್ಲೇ ಉತ್ಪಾದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇಲಾಖೆಯಲ್ಲಿ ಸ್ವಾವಲಂಬಿ ಸಾಧಿಸುವ ನಿಟ್ಟಿನಲ್ಲಿ ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
The Ministry of Defence is now ready for a big push to #AtmanirbharBharat initiative. MoD will introduce import embargo on 101 items beyond given timeline to boost indigenisation of defence production.
— Rajnath Singh (@rajnathsingh) August 9, 2020
Advertisement
ಇಂದು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಇಲಾಖೆಯ 101 ಉಪಕರಣಗಳನ್ನು ಉತ್ಪಾದಿಸಲು ದೇಶಿಯ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಹಲವು ಹಂತದ ಮಾತುಕತೆ ಮುಗಿದಿದ್ದು, ಸುಮಾರು 1 ಲಕ್ಷ 40 ಸಾವಿರ ಕೋಟಿಯ ಉತ್ಪಾದನೆ ಇದಾಗಿದೆ ಎಂದು ಹೇಳಿದ್ದಾರೆ.
Advertisement
Prime Minister Shri @narendramodi has given a clarion call for a self-reliant India based on the five pillars, i.e., Economy, Infrastructure, System, Demography & Demand and announced a special economic package for Self-Reliant India named ‘Atamnirbhar Bharat’.
— Rajnath Singh (@rajnathsingh) August 9, 2020
Advertisement
ಮದ್ದು, ಗುಂಡು, ಫಿರಂಗಿ, ಆರ್ಟಿಲರಿ ಗನ್, ರೆಡಾರ್, ಲಘು ಯುದ್ದ ವಿಮಾನ, ಹೆಲಿಕಾಪ್ಟರ್, ಸೋನಾರ್ ಸಿಸ್ಟಮ್, ಶಸ್ತ್ರಸಜ್ಜಿತ ವಾಹನ ಸೇರಿದಂತೆ 101 ವಿವಿಧ ಉಪಕರಣಗಳನ್ನು ದೇಶದಲ್ಲೇ ತಯಾರಿಸಲು ನಿರ್ಧರಿಸಿದೆ. ಇದರಿಂದ ಆತ್ಮನಿರ್ಭರ ಭಾರತಕ್ಕೆ ಉತ್ತೇಜನ ಸಿಗಲಿದೆ ಎಂದು ರಾಜನಾಥ್ ಸಿಂಗ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Advertisement
Taking cue from that evocation, the Ministry of Defence has prepared a list of 101 items for which there would be an embargo on the import beyond the timeline indicated against them. This is a big step towards self-reliance in defence. #AtmanirbharBharat
— Rajnath Singh (@rajnathsingh) August 9, 2020
2020 ರಿಂದ 2024ರ ನಡುವೆ ಈ ಮಹತ್ವದ ಕಾರ್ಯ ನಡೆಯಲಿದೆ. ಸಂಪೂರ್ಣವಾಗಿ ರಕ್ಷಣಾ ಸಾಮಗ್ರಿ ದೇಶದಲ್ಲೇ ಉತ್ಪಾದನೆ ಆಗಲಿದೆ. ಇದಕ್ಕಾಗಿ ಪ್ರತ್ಯೇಕ ಬಜೆಟ್ ಮುಖ್ಯಸ್ಥರ ನೇಮಕ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಆರ್ಥಿಕತೆ, ಮೂಲಸೌಕರ್ಯ, ವ್ಯವಸ್ಥೆ, ಜನಸಂಖ್ಯೆ ಮತ್ತು ಬೇಡಿಕೆ ಎಂಬ 5 ಆಧಾರ ಸ್ತಂಭಗಳ ಮೇಲೆ ಸ್ವಾವಲಂಬಿ ಭಾರತಕ್ಕಾಗಿ ಸ್ಪಷ್ಟ ಕರೆ ನೀಡಿದ್ದಾರೆ. ಹೀಗಾಗಿ ಸ್ವಾವಲಂಬಿ ಭಾರತಕ್ಕಾಗಿ `ಆರ್ಮಿ ಆತ್ಮ ನಿರ್ಭರ ಭಾರತ್’ ಹೆಸರಿನ ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ರಕ್ಷಣಾ ಇಲಾಖೆ ಘೋಷಿಸಿದೆ ಎಂದು ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ.
This decision will offer a great opportunity to the Indian defence industry to manufacture the items in the negative list by using their own design and development capabilities or adopting the technologies designed & developed by DRDO to meet the requirements of the Armed Forces.
— Rajnath Singh (@rajnathsingh) August 9, 2020
ಸಶಸ್ತ್ರ ಪಡೆಗಳ ಅವಶ್ಯಕತೆಗಳನ್ನು ಪೂರೈಸಲು ಡಿಆರ್‌ಡಿಒ ವಿನ್ಯಾಸಗೊಳಿಸಿದ ಮತ್ತು ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ನಕಾರಾತ್ಮಕ ಪಟ್ಟಿಯಲ್ಲಿರುವ ವಸ್ತುಗಳನ್ನು ತಯಾರಿಸಲು ಇಂಡಸ್ಟ್ರಿಗಳಿಗೆ ಉತ್ತಮ ಅವಕಾಶವನ್ನು ನೀಡುತ್ತದೆ. ಸೇನಾ ಪಡೆಗಳು, ಸಾರ್ವಜನಿಕ ಮತ್ತು ಖಾಸಗಿಯ ಎಲ್ಲ ಷೇರುದಾರರ ಜತೆ ಹಲವು ಸುತ್ತಿನ ಸಮಾಲೋಚನೆ ನಡೆಸಿದ ಬಳಿಕ ರಕ್ಷಣಾ ಇಲಾಖೆ ಸಾಮಗ್ರಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಮುಂದಿನ ದಿನಗಳಲ್ಲಿ 6 ರಿಂದ 7 ವರ್ಷ ದೇಶೀಯ ಉದ್ಯಮದ ಮೇಲೆ ಸುಮಾರು 4 ಲಕ್ಷ ಕೋಟಿ ರೂ.ಗಳ ಒಪ್ಪಂದಗಳನ್ನು ಮಾಡಲಾಗುವುದು ಎಂದು ಅಂದಾಜಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
The list is prepared by MoD after several rounds of consultations with all stakeholders, including the Armed Forces, public & private industry to assess current and future capabilities of the Indian industry for manufacturing various ammunition & equipment within India.
— Rajnath Singh (@rajnathsingh) August 9, 2020